ಉತ್ತರಾಖಂಡ: ಸುರಂಗ ಕುಸಿತ ಘಟನೆ; ಸಂತ್ರಸ್ತರ ರಕ್ಷಣೆಗೆ ಇನ್ನೂ 5 ದಿನ?

Source: Vb | By I.G. Bhatkali | Published on 20th November 2023, 7:47 AM | National News |

ಡೆಹ್ರಾಡೂನ್: ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಅವಶೇಷಗಳ ಅಡಿ ಸಿಲುಕಿರುವ 41 ಕಾರ್ಮಿಕರನ್ನು ರಕಿಸಲು ರಕ್ಷಣಾ ಕಾರ್ಯಕರ್ತರು ರವಿವಾರ ಕೂಡ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾರ್ಮಿಕರು ಕಳೆದ 170 ಗಂಟೆಗಳಿಂದ ಸುರಂಗದ ಒಳಗೆ ಸಿಲುಕಿರುವುದರಿಂದ ಅವರ ಆರೋಗ್ಯದ ಕುರಿತು ಆತಂಕ ವ್ಯಕ್ತವಾಗಿದೆ.ಕುಸಿದ ಸುರಂಗದ ಒಳಗೆ ಸಿಲುಕಿರುವ ಕಾರ್ಮಿಕರು ಇರುವ ಸ್ಥಳವನ್ನು ತಲುಪಲು ಮೇಲಿನಿಂದ ಲಂಬ ರಂಧ್ರ ಕೊರೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಅತ್ಯಧಿಕ ಕಾರ್ಯಕ್ಷಮತೆಯ ಕೊರೆಯುವ ಯಂತ್ರ ಮಧ್ಯಪ್ರದೇಶದ ಇಂದೋರ್‌ನಿಂದ ಇಲ್ಲಿಗೆ ತಲುಪಿದ ಬಳಿಕ ಶನಿವಾರ ಸಂಜೆ ಲಂಬ ರಂಧ್ರ ಕೊರೆಯಲು ಸಿದ್ಧತೆ ಆರಂಭವಾಗಿದೆ. ಸ್ಥಳದಲ್ಲಿರುವ ಪ್ರಧಾನಿ ಮಂತ್ರಿ ಕಚೇರಿ (ಪಿಎಂಒ)ಯ ಅಧಿಕಾರಿಗಳು ಹಾಗೂ ತಜ್ಞರ ತಂಡ ಕಾರ್ಮಿಕರನ್ನು ರಕ್ಷಿಸಲು ಏಕಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿವೆ. "ಸುರಂಗದಲ್ಲಿ ಸಿಲುಕಿದ ಕಾರ್ಮಿಕರನ್ನು ಆದಷ್ಟು ಬೇಗ ತಲುಪಲು ಕೇವಲ ಒಂದೇ ಯೋಜನೆಯಲ್ಲಿ ಕಾರ್ಯನಿರ್ವಹಿಸುವ ಬದಲು, ಏಕ ಕಾಲದಲ್ಲಿ ಐದು ಯೋಜನೆಗಳಲ್ಲಿ ಕಾರ್ಯನಿರ್ವಹಿಸಬೇಕೆಂಬ ಒಮ್ಮತದ ಅಭಿಪ್ರಾಯಕ್ಕೆ ತಜ್ಞರು ಬಂದಿದ್ದಾರೆ'' ಎಂದು ಪ್ರಧಾನ ಮಂತ್ರಿ ಅವರ ಮಾಜಿ ಸಲಹೆಗಾರ ಭಾಸ್ಕರ್ ಖು ತಿಳಿಸಿದ್ದಾರೆ.

ಹಲವು ಸಂಸ್ಥೆಗಳ ಸಂಘಟಿತ ಪ್ರಯತ್ನದಿಂದ ಕಾರ್ಮಿಕರನ್ನು ನಾಲೈದು ದಿನಗಳಲ್ಲಿ ರಕ್ಷಿಸುವ ಸಾಧ್ಯತೆ ಇದೆ. ಆದರೆ, ದೇವರು ದಯೆ ತೋರಿದರೆ, ಅವರನ್ನು ಅದಕ್ಕಿಂತ ಮೊದಲೇ ರಕ್ಷಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರವಿವಾರ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹಾಗೂ ರಕ್ಷಣೆ, ಪರಿಹಾರ ಕಾರ್ಯಾಚರಣೆಯನ್ನು ಪರಿಶೀಲಿಸಿ ದ್ದಾರೆ. "ನಾವು ಎಲ್ಲಾ ರೀತಿಯಿಂದಲೂ ಕಾರ್ಯ ನಿರ್ವಹಿಸುತ್ತಿದ್ದೇವೆ. ಎಲ್ಲಾ ರೀತಿಯ ತಜ್ಞರ ತಂಡ ಕಾರ್ಯ ನಿರ್ವಹಿಸುತ್ತಿದೆ' ಎಂದು ధామి ತಿಳಿಸಿದ್ದಾರೆ.

ಕೊರೆಯುವ ಇದ್ದಕ್ಕಿದ್ದಂತೆ ಯಂತ್ರದಲ್ಲಿ ಬಿರುಕು ಬಿಡುವ ಸದ್ದನ್ನು ಅಧಿಕಾರಿಗಳು ಕೇಳಿದ ಬಳಿಕ ಶುಕ್ರವಾರ ಸಂಜೆ ಕೊರೆಯುವುದನ್ನು ನಿಲ್ಲಿಸಲಾಗಿತ್ತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...