ಉ.ಕ. ಜಿಲ್ಲೆಯಲ್ಲಿಂದು ಎರಡು ಕೋವಿಡ್ ಡೆತ್; ಒಟ್ಟು 12ಸಾವು

Source: sonews | By Staff Correspondent | Published on 21st July 2020, 5:51 PM | Coastal News |

ಕಾರವಾರ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುವುದರೊಂದಿಗೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಮಂಗಳವಾರ ಶಿರಸಿ ತಾಲೂಕಿನ 76 ವರ್ಷದ ವೃದ್ಧ ಹಾಗೂ ಭಟ್ಕಳ ತಾಲೂಕಿನ 65 ವರ್ಷದ ವೃದ್ಧೆ  ಸೇರಿದಂತೆ ಇಬ್ಬರು ಕೋವಿಡ್ -19 ಗೆ ಬಲಿಯಾಗಿದ್ದಾಗಿ ವರದಿಯಾಗಿದೆ.

ನಿಮೋನಿಯಾ, ಮಧುಮೇಹ ಸಹಿತ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಇವರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿತ್ತು ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಕಾರವಾರ ಸರ್ಕಾರಿ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಮಂಗಳವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರನ್ನು ಆಯಾ ತಾಲೂಕುಗಳಿಗೆ ಕಳುಹಿಸಲಾಗಿದ್ದು ತಾಲೂಕಾಡಳಿತ ಕೋವಿಡ್ ಮಾರ್ಗಸೋಚಿಯಂತೆ ಅವರ ಕುಟುಂಗಳಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...