ಉ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಭಟ್ಕಳಕ್ಕೆ ಭೇಟಿ

Source: sonews | By Staff Correspondent | Published on 24th August 2019, 7:16 PM | Coastal News | Don't Miss |

* ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡುವ ಭರವಸೆ

ಭಟ್ಕಳ; ಪೊಲೀಸ್ ವರಿಷ್ಠಾಧಿಕಾರಿ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ ಶಿವಪ್ರಕಾಶ್ ದೇವರಾಜ್ ಶನಿವಾರ ಭಟ್ಕಳಕ್ಕೆ ಭೇಟಿ ನೀಡಿದ್ದು ಇಲ್ಲಿನ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ಪರಿಶೀಲನೆ ನಡೆಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆತೆ ಮೊದಲೆ ಆದ್ಯತೆ ನೀಡುವುದಾಗಿ ತಿಳಿಸಿದ್ದು ಸಧ್ಯ ನಮ್ಮ ಮುಂದೆ ಗಣೇಶ ಚೌತಿ ಹಾಗೂ ಮೊಹರಂ ಹಬ್ಬಗಳಿವೆ. ಎಲ್ಲರೂ ಕೂಡ ಸಂತೋಷ, ಸಡಗರದೊಂದಿಗೆ ಹಬ್ಬಗಳನ್ನು ಆಚರಿಸಬೇಕೆಂಬುಂದು ನಮ್ಮ ಆಪೇಕ್ಷೆಯಾಗಿದ್ದು ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸಕ್ಕೆ ಕೈಹಾಕಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದೀತು, ಕೋಮುಗಲಭೆಗಳಿಗೆ ಇಲ್ಲಿ ಯಾವುದೇ ಆಸ್ಪದವಿರದಂತೆ ಎಚ್ಚರಿಕೆಯನ್ನು ವಹಿಸುವುದಾಗಿ ತಿಳಿಸಿದ ಅವರು ಸಮಾಜಘಾತುಕರಿಗೆ, ಅಶಾಂತಿ ವಾತವರಣ ಸೃಷ್ಟಿಸುವವರಿಗೆ ಖಡಕ್ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. 

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಭೇಟಿ ನೀಡುತ್ತಿದ್ದು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲು ಯತ್ನಿಸುತ್ತಿದ್ದೇನೆ. ನಂತರವಷ್ಟೇ ಯೋಜನೆಗಳನ್ನು ರೂಪಿಸಿ ಆ ಪ್ರಕಾರ ನಡೆದುಕೊಳ್ಳಲಾಗುವುದು ಎಂದರು. 

ಈ ಸಂದರ್ಭದಲ್ಲಿ ಡಿ.ವೈ.ಎಸ್ಪಿ ವೆಲೆಂಟೇನ್ ಡಿ’ಸೋಜಾ ಹಾಗೂ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣಾಧಿಕಾರಿಗಳು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...