ಕೊರೊನಾ ಎದುರಿಸಲು ಲಸಿಕೆ ಅತಿ ಅವಶ್ಯಕ: ಮೋದಿ

Source: PTI | Published on 26th May 2021, 1:10 PM | National News |

ನವದೆಹಲಿ: ‘ಕೋವಿಡ್‌ ಬಳಿಕ ಜಗತ್ತು ಮೊದಲಿನಂತೆ ಇರುವುದಿಲ್ಲ. ಭವಿಷ್ಯದಲ್ಲಿ ನಡೆಯಲಿರುವ ಘಟನೆಗಳನ್ನು ಕೋವಿಡ್‌ ಪೂರ್ವ ಅಥವಾ ಕೋವಿಡ್‌ ನಂತರದ ಘಟನೆಗಳು ಎಂದು ನೆನಪಿಸಲಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.

ಬುದ್ಧಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ‘ವರ್ಚುವಲ್‌ ವೆಸಾಕ್‌ ಗ್ಲೋಬಲ್‌ ಸೆಲೆಬ್ರೇಷನ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ ವಿಶ್ವವು ಶತಮಾನಗಳಲ್ಲಿ ಈ ರೀತಿಯ ಸಾಂಕ್ರಾಮಿಕವನ್ನು ಕಂಡಿಲ್ಲ. ಆದರೆ, ಈಗ ಸಾಂಕ್ರಾಮಿಕದ ಬಗ್ಗೆ ಮೊದಲಿಗಿಂತ ಹೆಚ್ಚಿನ ತಿಳುವಳಿಕೆ ಇದೆ. ಕೊರೊನಾ ವಿರುದ್ಧದ ಹೋರಾಟ ಮತ್ತು ಜೀವಗಳನ್ನು ಉಳಿಸಲು ಲಸಿಕೆಯು ಬಹಳ ಮಹತ್ವದಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ, ಸಾಂಕ್ರಾಮಿಕದಿಂದಾಗಿ ತಮ್ಮ ಹತ್ತಿರದವರನ್ನು ಕಳೆದುಕೊಂಡವರಿಗೆ ಸಂತಾ‍ಪ ಸೂಚಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...