ಉಡುಪಿ ಜಿಲ್ಲೆಯಲ್ಲಿ ಜೂನ್ 10 ರಂದು ಲಸಿಕಾ ಲಭ್ಯತೆ ವಿವರ

Source: S.O. News Service | By MV Bhatkal | Published on 9th June 2021, 8:11 PM | Coastal News | Don't Miss |

ಉಡುಪಿ : ಜಿಲ್ಲೆಯಲ್ಲಿ ಜೂನ್ 10 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 100 ಡೋಸ್ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.
ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 50 ಡೋಸ್ ಹಾಗೂ ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 400 ಡೋಸ್ ಲಸಿಕೆ ನೀಡಲಾಗುವುದು.
45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ 2 ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ 150 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 100 ಡೋಸ್, ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿ) 100 ಡೋಸ್ ಹಾಗೂ ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 50 ಡೋಸ್ ಲಸಿಕೆ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 10 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.
ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 5 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ.
ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...