ಹೊಸದಿಲ್ಲಿ: 10 ದೇಶಗಳಲ್ಲಿ ಕೋವಿಶಿಲ್ಡ್ ಬಳಕೆ ನಿಷೇಧ ಭಾರತದಲು ಲಸಿಕೆಯ ಮರುಪರಿಶೀಲನೆ

Source: VB | By S O News | Published on 14th March 2021, 12:39 PM | National News |

ಹೊಸದಿಲ್ಲಿ: ಆ್ಯಸ್ಟರೋನೆಕ-ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೋವಿಶೀಲ್ಡ್  ಲಸಿಕೆ ಕೆಲವರಲ್ಲಿ ಅಪಾಯಕಾರಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದೆಂಬ ಆತಂಕದ ನಡುವೆ ಕೋವಿಶೀಲ್ಡ್  ಲಸಿಕೆಯ ಬಳಕೆ ಯನ್ನು ಕನಿಷ್ಠ 10 ದೇಶಗಳು ಸ್ಥಗಿತಗೊಳಿಸಿವೆ. ಈ ಹಿನ್ನೆಲೆಯಲ್ಲಿ ಕೋವಿಶೀಲ್ಡ್   ಲಸಿಕೆ ತೆಗೆದುಕೊಂಡ ಬಳಿಕ ಸಂಭವಿಸಿದ ಜನರ ಸಾವು ಹಾಗೂ ಆಸ್ಪತ್ರೆಗೆ ದಾಖಲಾದ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಲಸಿಕೆಯನ್ನು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ಮಾರಾಟ ಮಾಡುತ್ತಿದೆ. ಆಸ್ಟ್ರಿಯಾ, ಈಸ್ಟೋನಿಯಾ, ಲಾಟ್ವಿಯಾ, ಲಿಥುವಾನಿಯಾ ಹಾಗೂ ಲುಕ್ಸೆಂಬರ್ಗ್‌ನಂತಹ ದೇಶಗಳು ಆ್ಯಸ್ತನಕ ಲಸಿಕೆಯ ಬಳಕೆಯ ಒಂದು ಬ್ಯಾಚ್ ಅನ್ನು ಹಿಂಪಡೆದಿವೆ. ಡೆನ್ಮಾರ್ಕ್ ಸಹಿತ ಇತರ ದೇಶಗಳು ಆಸ್ಟ್ರಝೆನೆಕ ಲಸಿಕೆಯನ್ನು ಬಳಸುವುದನ್ನು ಎರಡು ವಾರಗಳ ಕಾಲ ರದ್ದುಗೊಳಿಸಿವೆ. ಯುರೋಪ್‌ನ ವಿವಿಧ ದೇಶಗಳಲ್ಲಿ ಆಸ್ಟ್ರಝೆನೆಕದ ಲಸಿಕೆ ಸ್ವೀಕರಿಸಿದ ಕನಿಷ್ಠ 22 ಮಂದಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಹಾಗೂ ಶ್ವಾಸಕೋಶದ ಧಮನಿಬಂಧ ಉಂಟಾಗಿದೆ ಎಂದು ವರದಿ ಹೇಳಿದೆ.

ಆದರೆ, ಆಸ್ಟ್ರಝೆನೆಕದ ಲಸಿಕೆ ಬಳಸುವುದನ್ನು ಸ್ಥಗಿತಗೊಳಿಸಲು ಯಾವುದೇ ಕಾರಣ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಇದರ ಲಸಿಕೆ ಸಲಹಾ ಸಮಿತಿ ಸುರಕ್ಷಾ ದತ್ತಾಂಶವನ್ನು ಪರಿಶೀಲಿಸುತ್ತಿದೆ. ಲಸಿಕೆ ಹಾಗೂ ರಕ್ತ ಹೆಪ್ಪುಗಟ್ಟುವಿಕೆ ನಡುವೆ ಯಾವುದೇ ಸಂಬಂಧ ಇರುವುದು ಸಾಬೀತಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳಿದೆ.

ಭಾರತದ ಸನ್ನಿವೇಶದಲ್ಲಿ ಈ ಬೆಳವಣಿಗೆಯನ್ನು ಪರಿಶೀಲಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಲಸಿಕೆಯ ಬಳಿಕ ಪ್ರತಿಕೂಲ ಘಟನೆಗಳ ಕುರಿತ ರಾಷ್ಟ್ರೀಯ ಸಮಿತಿಯ ಹಿರಿಯ ಅಧಿಕಾರಿ ಹೇಳಿದ್ದಾರೆ.

“ಕೋವಿಶೀಲ್ಡ್  ಲಸಿಕೆ ಸ್ವೀಕರಿಸಿದವರಲ್ಲಿ ಕಳವಳಪಡುವ ಯಾವುದೇ ಅಂಶ ನಮಗೆ ಇದುವರೆಗೆ ಕಂಡು ಬಂದಿಲ್ಲ. ಹೊಸ ಮಾಹಿತಿಯ ಹಿನ್ನೆಲೆಯಲ್ಲಿ ಲಸಿಕೆ ತೆಗೆದುಕೊಂಡವರ ಸಾವು ಹಾಗೂ ಆಸ್ಪತ್ರೆಗೆ ದಾಖಲಾಗಿರುವುದನ್ನು ಮತ್ತೊಮ್ಮೆ ಪರಿಶೀಲಿಸಲಿದ್ದೇವೆ' ಎಂದು ಎಇಎಫ್‌ಐ ಸಮಿತಿಯ ಸಲಹೆಗಾರ ನರೇಂದ್ರ ಅರೋರಾ ಹೇಳಿದ್ದಾರೆ. ಭಾರತದಲ್ಲಿ ಕೊರೋನ ಲಸಿಕೆ ತೆಗೆದುಕೊಂಡ 2.63 ಕೋಟಿ ಜನರಲ್ಲಿ ಶೇ.90ರಷ್ಟು ಕೋವಿಶೀರ್ ಲಸಿಕೆ ತೆಗೆದುಕೊಂಡಿದ್ದಾರೆ. ಈ ಲಸಿಕೆ ತೆಗೆದುಕೊಂಡ ಕೆಲವು ದಿನಗಳ ಒಳಗೆ ಯಾರೊಬ್ಬರೂ ಮೃತಪಟ್ಟಿರುವುದು ವರದಿಯಾಗಿಲ್ಲ. ಆದರೆ, ರಾಷ್ಟ್ರೀಯ ಸಮಿತಿ ಈ ಬಗ್ಗೆ ಪರಿಶೀಲನೆಯನ್ನು ಇನ್ನಷ್ಟೇ ಪೂರ್ಣಗೊಳಿಸಬೇಕಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...