ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

Source: SO News | By Laxmi Tanaya | Published on 19th September 2020, 11:00 PM | State News | Don't Miss |

ಕೋಟ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ  ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ.

 ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಷಯ ತಿಳಿಸಿದ್ದಾರೆ.

ಪತ್ರಿಕಾ ವಿತರಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಗಂಗಾಧರ ಹಿರೇಗುತ್ತಿಯವರು ಪತ್ರಿಕೋದ್ಯಮದ ಕುರಿತು ಬಾಲ್ಯದಲ್ಲೇ ಹಲವು ಕನಸುಗಳನ್ನು ಕಂಡಿದ್ದರು.  ಅನಂತರ `ಮುಂಗಾರು ದಿನಪತ್ರಿಕೆಯಲ್ಲಿ ಉತ್ತರ ಕನ್ನಡದ ವರದಿಗಾರನಾಗಿ 10 ವರ್ಷ ಸೇವೆ ಸಲ್ಲಿಸಿ, ಅನಂತರ ಕಾರವಾರದ ಜಿಲ್ಲಾ ಕೇಂದ್ರದಿಂದ  `ಕರಾವಳಿ ಮುಂಜಾವು' ದಿನಪತ್ರಿಕೆ  ಆರಂಭಿಸಿದ್ದು ಪ್ರಸ್ತುತ ಈ ಪತ್ರಿಕೆ ರಾಜ್ಯದ ಪ್ರಸಿದ್ಧ ದಿನಪತ್ರಿಕೆಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಅತ್ಯುನ್ನತ ಸಾಧನೆಗಾಗಿ ಹಿರೇಗುತ್ತಿಯವರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ, ಸಾಧನ ರಾಷ್ಟ್ರೀಯ ಪ್ರಶಸ್ತಿಗಳು ಸಂದಿದೆ. ವಡ್ಡರ್ಸೆಯವರ ಪತ್ರಿಕೋದ್ಯಮದ  ಆದರ್ಶ ಮತ್ತು ಸಮಾಜವಾದಿ ನಿಲುವನ್ನು ಮೈಗೂಡಿಸಿಕೊಂಡ ಹಿರೇಗುತ್ತಿಯವರಿಗೆ ಈ  ಪ್ರಶಸ್ತಿ ನೀಡಿ ಗೌರವಿಸುವುದು ಹೆಮ್ಮೆಯ ವಿಚಾರ ಎಂದರು. 

ಅಕ್ಟೋಬರ್‌ 11ರಂದು ಅಪರಾಹ್ನ 4.30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ಪ್ರಶಸ್ತಿ ಪ್ರದಾನಗೈಯಲಿದ್ದಾರೆ ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವವರು ಎಂದು ತಿಳಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...