ಹೆರಿಗೆಗೂ ಮುನ್ನ ತಾಯಿಗೆ ನೆಗೆಟಿವ್, ನವಜಾತ ಶಿಶುವಿಗೆ ಕೊರೊನಾ ಪಾಸಿಟಿವ್

Source: ಎಎನ್‌ಐ‌ | Published on 29th May 2021, 7:46 PM | National News |

ವಾರಣಾಸಿ: ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೋವಿಡ್ ದೃಢಪಟ್ಟಿದೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಸರ್ ಸುಂದರ್‌ಲಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಹೆರಿಗೆಗೆ ಮುನ್ನ ತಾಯಿಯನ್ನು ಮೇ 24 ರಂದು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಯಿತು. ಮರುದಿನ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆ ಮಗುವಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಕೌಶನ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.

ಆರ್‌ಟಿ-ಪಿಸಿಆರ್ ಪರೀಕ್ಷೆಯು ಕೆಲವು ನ್ಯೂನತೆಗಳಿಂದ ಕೂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...