ವಾಂಖೆಡೆ ಕ್ರೀಡಾಂಗಣದ ಮೂರು ಬ್ಲಾಕ್‌ಗಳಿಗೆ ವೆಂಗ್‌ಸರ್ಕಾರ್‌ ಹೆಸರಿಡಲು ಒತ್ತಾಯ

Source: PTI | Published on 3rd August 2020, 12:42 AM | Sports News | Don't Miss |

 


ಮುಂಬೈ: ವಾಂಖೆಡೆ ಕ್ರೀಡಾಂಗಣದ ಮೂರು ಬ್ಲಾಕ್‌ಗಳಿಗೆ ಭಾರತದ ಖ್ಯಾತ ಕ್ರಿಕೆಟಿಗ ದಿಲೀಪ್‌ ವೆಂಗ್‌ಸರ್ಕಾರ್‌ ಅವರ ಹೆಸರಿಡುವಂತೆ ಮುಂಬೈ ಕ್ರಿಕೆಟ್‌ ಸಂಸ್ಥೆಯ ಅಪೆಕ್ಸ್‌ ಕೌನ್ಸಿಲ್ ಸದಸ್ಯ ನದೀಮ್‌ ಮೆಮನ್‌ ಒತ್ತಾಯಿಸಿದ್ದಾರೆ.
‘ಮುಂಬೈನ ಕ್ರಿಕೆಟಿಗನಾಗಿರುವ ವೆಂಗ್‌ಸರ್ಕಾರ್‌‌ ಅವರು 116 ಟೆಸ್ಟ್‌ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವರು ತಂಡದ ನಾಯಕತ್ವವನ್ನೂ ವಹಿಸಿದ್ದರು. ವಾಂಖೆಡೆ ಕ್ರೀಡಾಂಗಣದ ಉತ್ತರ ಸ್ಟ್ಯಾಂಡ್‌ನ ಎ,ಬಿ,ಸಿ ಬ್ಲಾಕ್‌ಗಳಿಗೆ ಅವರ ಹೆಸರಿಡುವಂತೆ ಪ್ರಸ್ತಾಪ ಸಲ್ಲಿಸಿದ್ದೇನೆ‘ ಎಂದು ನದೀಮ್‌ ಅವರು ಮುಂಬೈ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷ ವಿಜಯ್‌ ಪಾಟೀಲ್‌ ಹಾಗೂ ಅಪೆಕ್ಸ್‌ ಕೌನ್ಸಿಲ್‌ನ ಎಲ್ಲ ಸದಸ್ಯರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
’ಕ್ರೀಡಾಂಗಣದ ಬ್ಲಾಕ್‌ಗಳಿಗೆ ವೆಂಗ್‌ಸರ್ಕಾರ್ ಹೆಸರಿಟ್ಟರೆ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ‘ ಎಂದು ಕ್ಯೂರೇಟರ್‌ ಕೂಡ ಆಗಿರುವ ಮೆಮನ್‌ ಹೇಳಿದ್ದಾರೆ.
ವಾಂಖೆಡೆ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಈಗಾಗಲೇ ಬ್ಯಾಟಿಂಗ್‌ ದಿಗ್ಗಜರಾದ ಸುನಿಲ್‌ ಗಾವಸ್ಕರ್‌ ಹಾಗೂ ಸಚಿನ್‌ ತೆಂಡೂಲ್ಕರ್‌ ಅವರ ಹೆಸರಿಡಲಾಗಿದೆ. ದೇಶಿ ಕ್ರಿಕೆಟ್‌ನಲ್ಲಿ ಇವರು ಮುಂಬೈ ತಂಡವನ್ನು ಪ್ರತಿನಿಧಿಸಿದ್ದಾರೆ.
ಮುಂದಿನ ಅಪೆಕ್ಸ್‌ ಕೌನ್ಸಿಲ್‌ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕೆಂದು ಮೆಮನ್‌ ಒತ್ತಾಯಿಸಿದ್ದಾರೆ

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...