ಬಾಲಿವುಡ್ ಹಿರಿಯ ನಟ ಶಶಿ ಕಪೂರ್ ನಿಧನ; ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಹಲವು ಗಣ್ಯರ ಸಂತಾಪ

Source: S O News Service | By I.G. Bhatkali | Published on 4th December 2017, 8:37 PM | National News | Don't Miss |

ಮುಂಬೈ: ಪದ್ಮಭೂಷಣ, ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಾಲಿವುಡ್‌ ಹಿರಿಯ ನಟ, ನಿರ್ಮಾಪಕ ಶಶಿ ಕಪೂರ್ (79)  ಮುಂಬೈನಲ್ಲಿ ಸೋಮವಾರ ನಿಧನರಾದರು.

ಅವರು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ತೀವ್ರ ಉಸಿರಾಟದ ತೊಂದರೆಯ ಕಾರಣ ಭಾನುವಾರ ಅವರು ಮುಂಬೈನ ಕೋಕಿಲಾ ಬೆನ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಶಶಿ ಕಪೂರ್ ಅವರು ಮೂರು ರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಲ್ಕು ಫಿಲ್ಮ್ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದರು. 2011ರಲ್ಲಿ ಪದ್ಮಭೂಷಣ ಪುರಸ್ಕಾರ,  2015ರಲ್ಲಿ ದಾದಾ ಸಾಹೇಫ್‌ ಪಾಲ್ಕೆ ಪ್ರಶಸ್ತಿಯ ಗೌರವ ಅವರಿಗೆ ದೊರೆತಿದೆ. ಕುನಾಲ್ ಕಪೂರ್, ಸಂಜನಾ ಕಪೂರ್ ಮತ್ತು ಕರಣ್ ಕಪೂರ್ ಶಶಿ ಕಪೂರ್‌ ಅವರ ಮಕ್ಕಳು.

ಶಶಿಕಪೂರ್ ‘ಬಸೇರಾ’, ‘ಪಿಘಲ್ತಾ ಆಸ್ಮಾನ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಶಶಿ ಕಪೂರ್ ಅಭಿನಯಿಸಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಬಾಲಿವುಡ್ ಹಿರಿಯ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...