ಮುಖ್ಯಮಂತ್ರಿಯೊಂದಿಗೆ ವಿಡಿಯೋ ಸಂವಾದ : ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರು, ಜಿಲ್ಲಾಧಿಕಾರಿ ಭಾಗಿ           

Source: sonews | By Staff Correspondent | Published on 13th July 2020, 10:30 PM | Coastal News | Don't Miss |

ಕಾರವಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರು ಭಾಗಿಯಾಗಿ ಜಿಲ್ಲೆಯ ಕೋವಿಡ್ ನಿಯಂತ್ರಣ ಕ್ರಮಗಳು ಹಾಗೂ ಸೌಕರ್ಯದ ಕುರಿತು ಮಾಹಿತಿ ನೀಡಿದರು.

ಭಟ್ಕಳವನ್ನು ಹೊರತು ಪಡಿಸಿ ಉಳಿದ ತಾಲೂಕುಗಳಲ್ಲಿ ಸ್ವಯಂ ಲಾಕ್‍ಡೌನ್‍ಗೆ ಜನರು ಆಸಕ್ತಿ ವಹಿಸಿದ್ದು, ಇದಕ್ಕೆ ಬೆಂಬಲ ನೀಡಲಾಗುವುದು ಹಾಗೂ ಭಟ್ಕಳದಲ್ಲಿ ಮಾತ್ರ ಸರ್ಕಾರಿ ಆದೇಶವನ್ನು ಮುಂದುವರೆಸಲಾಗುವುದು ಎಂದು ಉಸ್ತುವಾರಿ ಸಚಿವರು ಹೇಳಿದರು. 

ಜಿಲ್ಲೆಯಲ್ಲಿ 600 ಲ್ಯಾಬ್ ಟೆಸ್ಟ್ ಮಾಡುವ ಟಾರ್ಗೆಟ್ ಇದ್ದು, ಇಂದು 900 ಟೆಸ್ಟ್ ಮಾಡಲಾಗಿದೆ. 2500 ಬೆಡ್ ವ್ಯವಸ್ಥೆಯನ್ನು ಕೋವಿಡ್-19 ಚಿಕಿತ್ಸೆಗಾಗಿಯೇ ಸಿದ್ಧವಿರುತ್ತವೆ. ಈ ಸನ್ನಿವೇಶದಲ್ಲಿ ನರ್ಸ, ಲ್ಯಾಬ್ ಟೆಕ್ನಿಷಿಯನ್ ಮತ್ತು 13 ಅಂಬ್ಯುಲೆನ್ಸ್‍ಗಳ ಅವಶ್ಯಕತೆ ಇದ್ದು, ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಲ್ಯಾಬ್ ಟೆಕ್ನಿಷಿಯನ್ ಮತ್ತು ನರ್ಸಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಹಾಗೂ ಅಂಬ್ಯುಲೆನ್ಸ್‍ಗಳನ್ನು ಶೀಘ್ರವಾಗಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಟ್ಕಳವನ್ನು ಹೊರತು ಪಡಿಸಿ ಉಳಿದ ತಾಲೂಕುಗಳಲ್ಲಿ ಸ್ವಯಂ ಲಾಕ್‍ಡೌನ್‍ಗೆ ಜನರು ಆಸಕ್ತಿ ವಹಿಸಿದ್ದು, ಇದಕ್ಕೆ ಬೆಂಬಲ ನೀಡಲಾಗುವುದು ಹಾಗೂ ಭಟ್ಕಳದಲ್ಲಿ ಮಾತ್ರ ಸರ್ಕಾರಿ ಆದೇಶವನ್ನು ಮುಂದುವರೆಸಲಾಗುವುದು ಎಂದು ಉಸ್ತುವಾರಿ ಸಚಿವರು ಹೇಳಿದರು. 

ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 30 ಪ್ರಕರಣಗಳು ಕಂಡುಬರುತ್ತಿವೆ. ಶೇ.40ರಷ್ಟು ಭಟ್ಕಳದಿಂದಲೇ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ರ್ಯಾಪಿಡ್ ಟೆಸ್ಟ್ ಮಾಡುವುದು ಅವಶ್ಯಕವಾಗಿದೆ. ಇಲ್ಲಿವರೆಗೂ 633 ಪ್ರಕರಣಗಳಾಗಿದ್ದು, ಅದರಲ್ಲಿ 374 ಸಕ್ರಿಯವಾಗಿದ್ದು, 254 ಡಿಸ್ಚಾರ್ಜ್ ಆಗಿದ್ದು, 5 ಪ್ರಕರಣ ಮರಣ ಹೊಂದಿವೆ. ಉಳಿದಂತೆ ಯಾವುದೇ ಕ್ರಿಟಿಕಲ್ ಕಂಡಿಷನ್ ಇರುವುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾ ಪಂಚಾಯತ್ ಸಿಇಒ ಎಂ.ರೋಷನ್, ಎಸಿ ಪ್ರಿಯಾಂಗಾ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರದ್ ನಾಯ್ಕ ಸೇರಿದಂತೆ ಇತರರು ಹಾಜರಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...