ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧ ಆಯ್ಕೆ

Source: SOnews | By Staff Correspondent | Published on 23rd June 2023, 11:46 PM | State News |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  

ಜೂ.30ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಳ್ಳಲು ಇಂದು(ಜೂ.23) ಅಂತಿಮ ದಿನವಾಗಿತ್ತು. ಯಾರೊಬ್ಬರೂ ನಾಮಪತ್ರ ಹಿಂಪಡೆದಿಲ್ಲ. ಅಲ್ಲದೆ, ಕಣದಲ್ಲಿ ಉಳಿದಿರುವುದು ಮೂವರೇ ಅಭ್ಯರ್ಥಿಗಳಾಗಿ ಆಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.  ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಜಗದೀಶ್ ಶೆಟ್ಟರ್ ಹಾಗೂ ಎನ್.ಎಸ್. ಬೋಸರಾಜು, ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...