ಬೆಂಗಳೂರು: ಉಪಚುನಾವಣೆಗೆ ವಿಜಯೇಂದ್ರ ಸ್ಪರ್ಧೆ?

Source: VB | By S O News | Published on 1st August 2021, 7:06 PM | State News |

ಬೆಂಗಳೂರು: ಶಾಸಕ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಉಪಾಧ್ಯಕ್ಷ ಹಾಗೂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀ ನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತ ರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು  ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ. ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ವಿಜಯೇಂದ್ರ ಹೆಸರು ಕೇಳಿ ಬಂದಿತ್ತು. ಆದರೆ, ಚುನಾವಣಾ ಕಣದಿಂದ ದೂರ ಉಳಿದು ಪಕ್ಷದ ಅಭ್ಯರ್ಥಿಗಳ ಪರವಾಗಿ ಕಾರ್ಯನಿರ್ವಹಿಸಿದ್ದರು. ಕೆ.ಆರ್.ಪೇಟೆ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಜಯೇಂದ್ರ ಶ್ರಮಿಸಿದ್ದರು.

ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಹಾಗೂ ಉದಾಸಿ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಡೆಯಬೇಕಿದೆ. ಹೀಗಾಗಿ ಬಿಎಸ್‌ವೈ ಆಪ್ತರು ವಿಜಯೇಂದ್ರ 2. ವಿಧಾನಸೌಧ ಪ್ರವೇಶಕ್ಕೆ ಉಪಚುನಾವಣೆ ಅಖಾಡಕ್ಕಿಳಿಸಲು ಮುಂದಾಗಿದ್ದಾರೆನ್ನ ಲಾಗಿದೆ. ವಿಜಯೇಂದ್ರ ಶಾಸಕರಾದರೆ ಸದನದ ಒಳಗೆ ಮತ್ತು ಹೊರಗೆ ಬಾಂಧವ್ಯ ವೃದ್ಧಿಸಿಕೊಳ್ಳಲು ಸಹಾಯವಾಗುತ್ತದೆ ಮತ್ತು ಸರಕಾರದಲ್ಲಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲು ಭವಿಷ್ಯದಲ್ಲಿ ಅವರಿಗೆ ಬಲ ವಾದಆಧಾರಒದಗಿಸಿದಂತಾಗುತ್ತದೆಎಂಬ ಅಭಿಪ್ರಾಯವಿದೆ.

ಯಡಿಯೂರಪ್ಪನವರಿಗೆ ಆಪ್ತರಾಗಿದ್ದ ಸಿ.ಎಂ. ಉದಾಸಿ ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ ಉಪಚುನಾವಣೆಯನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜು ಕಲ್ಕೋಟಿ ಹೇಳಿದ್ದಾರೆ. ವಿಜಯೇಂದ್ರ ಅವರ ಹೆಸರು ಇಲ್ಲಿಯವರೆಗೆ ಪ್ರಸ್ತಾಪವಾಗಿಲ್ಲ. ಬಿಜೆಪಿ ಟಿಕೆಟ್‌ನಲ್ಲಿ ಯಾರು ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಅವರು ಗೆಲ್ಲುತ್ತಾರೆ. ಉಪಚುನಾವಣೆ ಸಂಬಂಧ ಪಕ್ಷದೊಳಗೆ ಚರ್ಚೆಗಳು ಆರಂಭವಾಗಬೇಕಿದೆ, ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...