ವಿಜಯೇಂದ್ರ ಪದಗ್ರಹಣ ಹಿರಿಯ ಬಿಜೆಪಿ ನಾಯಕರ ಅನುಪಸ್ಥಿತಿ; ಯತ್ನಾಳ್, ಸೋಮಣ್ಣ ಬೆಲ್ಲದ ಸಹಿತ ಹಲವರ ಗೈರು

Source: Vb | By I.G. Bhatkali | Published on 17th November 2023, 8:57 AM | State News |

ಬೆಂಗಳೂರು: ಬಿಜೆಪಿಯ ಹಲವು ಹಿರಿಯ ನಾಯಕರ ಅನುಪಸ್ಥಿತಿ, ಅಸಮಾಧಾನ ಗಳ ನಡುವೆಯೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರೂ ಆಗಿರುವ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಬುಧವಾರ ಇಲ್ಲಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ಕಾರ್ಯಕರ್ತರ ಜಯಕಾರ, ಹಿರಿಯ ಮುಖಂಡರ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಳಿಕ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇ ವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷಸ್ಥಾನ ವಂಚಿತರು, ಬಿಎಸ್‌ವೈ ಕುಟುಂಬದ ವಿರುದ್ದ ಅಸಮಾಧಾನಗೊಂಡವರು ಹಾಗೂ ಪಕ್ಷ ತೊರೆಯಲು ಸಿದ್ದರಾಗಿರುವ ಹಲವು ಹಿರಿಯ ಮುಖಂಡರು ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪದಗ್ರಹಣ ಸಮಾರಂಭದಿಂದ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಬುಧವಾರ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಿಂದ ವಿಜಯಪುರ ಕ್ಷೇತ್ರದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಅರವಿಂದ ಬೆಲ್ಲದ್, ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ದೂರವೇ ಉಳಿದಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...