ಗ್ರಾಮಮಟ್ಟದ ಅಧಿಕಾರಿಗಳು ಕುಡಿಯುವ ನೀರು ಉದ್ಯೊಗ ಖಾತ್ರಿ ಯೋಜನೆಗೆ ಆದ್ಯತೆ ಮೇಲೆ ಕೆಲಸ ಮಾಡಬೇಕು;ಜಿ.ಪಂ. ಸಿ.ಇ.ಓ ಡಾ.ಬಿ.ಸಿ.ಸತೀಶ

Source: so news | By MV Bhatkal | Published on 17th March 2019, 11:23 PM | State News | Don't Miss |


ಧಾರವಾಡ:ಜಿಲ್ಲೆಯಲ್ಲಿ ಬರಗಾಲ ಮುಕ್ತಗೊಳಿಸಲು ಗ್ರಾಮಮಟ್ಟದಲ್ಲಿರುವ ಎಲ್ಲ ಅಧಿಕಾರಿಗಳು ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜನರಿಗೆ ಸ್ಥಳೀಯವಾಗಿ ಉದ್ಯೊಗ ಮಾಡಲು ಉದ್ಯೊಗ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಬಿ.ಸಿ.ಸತೀಶ ಹೇಳಿದರು.
ಅವರು ಇಂದು ಮಧ್ಯಹ್ನ ಧಾರವಾಡ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ಮತದಾನ ಜಾಗೃತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ಬರ ನಿರ್ವಹಣೆ ಕುರಿತು ಪಾಲಿಸಬೇಕಾದ ನಿಯಮಗಳ ಪಾಲನೆ ಕುರಿತು ಜರುಗಿದ ಧಾರವಾಡ ತಾಲುಕಿನ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ, ಕಂದಾಯ ನಿರೀಕ್ಷಕರ, ಗ್ರಾಮ ಪಂಚಾಯ ಕಾರ್ಯದರ್ಶಿಗಳ ಮತ್ತು ಗ್ರಾಮಲೇಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಧಾರವಾಡ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಮುಂದೆ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳಿಗೆ ಅಗತ್ಯ ಕ್ರಮವಹಿಸಿಬೇಕಾದ ವರದಿಯನ್ನು ಸಲ್ಲಿಸಿ ಹಿಂದಿನ ವರ್ಷದ ಬೆಸಿಗೆಯಲ್ಲಿ ಕೆಲ ಗ್ರಾಮಗಳಲ್ಲಿ ಮೇ ಅಂತ್ಯಕ್ಕೆ ಕುಡಿಯುವ ನೀರಿನ ಅಭಾವವಾಗಿತ್ತು. ಅಂತಲ್ಲಿ ಖಾಸಗಿ ಬೊರವೆಲ್ ನೀರು ಖರೀದಿ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಹಾಗೂ ಇತರ ಪರ್ಯಾಯ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಗ್ರಾಮೀಣ ಜನರಿಗ ಅನುಕೂಲವಾಗುವಂತೆ ಕುಡಿಯುವ ನೀರು ಹಾಗೂ ಬರ ಸಂಬಂಧಿತ ಸಮಸ್ಯೆಗಳ ಕುರಿತು ಅಹವಾಲು, ಮಾಹಿತಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಚೇರಿ, ತಾಲೂಕಾ ಪಂಚಾಯತ ಕಚೇರಿ ಹಾಗೂ ತಹಶಿಲ್ದಾರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸಿ.ಇ.ಓ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಗ್ರಾಮಮಟ್ಟದ ಪಿ.ಡಿ.ಓ, ಗ್ರಾಮಲೇಕ್ಕಾಧಿಕಾರಿಗಳು ತಮ್ಮ ಗ್ರಾಮದಲ್ಲಿರುವ ಸರಕಾರಿ ಹಾಗೂ ಖಾಸಗಿ ಬೋರವೆಲ್‌ಗಳ ಸಂಖ್ಯೆ ನೀರು ಸಂಗ್ರಹಗಾರ, ನೀರು ಶುದ್ದಿಕರಣ ಘಟಕ ಹಾಗೂ ಎಷ್ಟು ದಿನಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇತ್ಯಾದಿ ವಿವರ ವರದಿಯನ್ನು ಮುಂದಿನ ಎರಡ ಮೂರುದಿನದಲ್ಲಿ ಸಲ್ಲಿಸಬೇಕೆಂದು ಅವರು ಸೂಚಿಸಿದರು.
ಎಪ್ರಿÃಲ್ ೨೩ ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿಗ್ರಾಮದ ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಕನಿಷ್ಠ ಮೂರರಿಂದ ನಾಲ್ಕು ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಪಂಚಾಯತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸೆಕ್ಟರ್ ಅಧಿಕಾರಿಗಳ ಸಹಕಾರದಿಂದ ಆಯೋಜಿಸಬೇಕು. ಗ್ರಾಮದ ಯಾವೂಬ್ಬ ಅರ್ಹ ಮತದಾರನೂ ಮತದಾನದಿಂದ ಹೊರಗುಳಿಯದಂತೆ ಪ್ರತಿ ಮನೆಮನೆಗೆ ಮತದಾನದ ಮಹತ್ವ ತಲುಪುವಂತೆ ಮತ್ತು ಮತದಾನದಲ್ಲಿ ಭಾಗವಹಿಸುವಂತೆ ಕ್ರಮವಹಿಸಬೇಕೆಂದು ಸಿ.ಇ.ಓ ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಶೀಲ್ದಾರ ಪ್ರಕಾಶ ಕುದರಿ, ಇ.ಓ ಎಸ್.ಎಸ್.ಕಾದ್ರೊಳ್ಳಿ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಕೆ.ಓಲಿಕಾರ ಮಾತನಾಡಿ, ಬರನಿರ್ವಹಣೆ, ಕುಡಿಯುವ ನೀರು ಮತ್ತು ಉದ್ಯೊಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಧಾರವಾಡ ತಾಲ್ಲೂಕಿನ ಎಲ್ಲ ಗ್ರಾಮಪಂಚಾಯತ ಅಭೀವೃದ್ಧಿ ಅಧಿಕಾರಿಗಳು, ಹೊಬಳಿಗಳ ಕಂದಾಯ ನಿರೀಕ್ಷಕರು, ಎಲ್ಲ ಗ್ರಾಮಗಳ ಗ್ರಾಮಲೇಕ್ಕಾಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಾದ ಅಭಿಯಂತರರು ಭಾಗವಹಿಸಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...