ಜೂ.18 ರಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಗ್ರಾಮ ವಾಸ್ತವ್ಯ

Source: so news | By MV Bhatkal | Published on 15th June 2019, 10:03 PM | State News | Don't Miss |

ಹಾಸನ: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಜೂ.18 ರಂದು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಜೆ.ಸಿ.ಪುರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. 
ಮುಖ್ಯ ಮಂತ್ರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು.
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಜೂ.18ರಂದು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿಗೆ ಸಂಜೆ. 5 ಗಂಟೆಗೆ ಆಗಮಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವರು. ಅಂದು ಕಣಕಟ್ಟೆ ಹೋಬಳಿಯ ಜೆ.ಸಿ.ಪುರದಲ್ಲಿ ಸಂಜೆ 6 ಗಂಟೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವುದರ ಜೊತೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. 
ಇದೇ ವೇಳೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಕೆ.ಎನ್. ವಿಜಯ್ ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ ಗೌಡ ಹಾಗೂ ವಿವಿಧ ಇಲಾಖಾ ಅಧಿಕಾರಿಗಳೂ ಸಹ ಇದೇ ವೇಳೆ ಗ್ರಾಮದಲ್ಲಿ ತಂಗಲಿದ್ದಾರೆ. 
ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯಕ್ಕೆ ಪೂರಕವಾಗಿ ಕಣಕಟ್ಟೆಯ ಜೆ.ಸಿ.ಪುರದ ಶಾಲೆ, ವಿದ್ಯಾರ್ಥಿನಿಲಯ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ದತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಈ ಎರಡು ಹೋಬಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಯವರು ಜೂ.18ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಜೂ.19ರಂದು ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಿದ್ದಾರೆ ಎಲ್ಲಾ ಇಲಾಖಾ ಅಧಿಕಾರಿಗಳು ಈ ಸಂದರ್ಭದಲ್ಲಿ ಅಗತ್ಯ ಮಾಹಿತಿಯೊಂದಿಗೆ ಹಾಜರಿರಬೇಕು ಎಂದು ಅವರು ಹೇಳಿದರು.
ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸಸಿನೆಡುವ ಕಾರ್ಯಕ್ರಮ ವಿವಿಧ ರೀತಿ ಜಾಗೃತಿ ಚಟುವಟಿಕೆಗಳು ನಡೆಯಲಿದೆ. ಒಟ್ಟಾರೆ ಇವೆಲ್ಲವೂ ಯಾವುದೇ ರೀತಿಯ ಲೋಪಗಳಿಲ್ಲದಂತೆ ಆಯೋಜನೆಯಾಗಬೇಕು ಅದಕ್ಕೆ ಎಲ್ಲಾ ಅಧಿಕಾರಿಗಳು ಗಮನಹರಿಸಬೇಕು ಎಂದು ಎಂ.ಎಲ್.ವೈಶಾಲಿ ತಿಳಿಸಿದ್ದಾರೆ.
ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಡಾ.ಎಚ್.ಎಲ್.ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಸತೀಶ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸವಿತಾ, ಮುಖ್ಯ ಯೋಜನಾಧಿಕಾರಿ ಕೆ.ಎ.ಪರಪ್ಪಸ್ವಾಮಿ, ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದ್ದು ಹಲವಾರು ಸಲಹೆಗಳನ್ನು ನೀಡಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...