ಚುನಾವಣಾ ರ‍್ಯಾಲಿಯಲ್ಲಿ ಐಎಎಫ್ ಹೆಲಿಕಾಪ್ಟರ್ ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

Source: Vb | By I.G. Bhatkali | Published on 20th March 2024, 12:53 AM | National News |

ಹೊಸದಿಲ್ಲಿ: ಆಂಧ್ರ ಪ್ರದೇಶದ ಪಾಲ್ನಾಡುವಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯು ಪಡೆ (ಐಎಎಫ್ )ಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಾಕೇತ ಗೋಖಲೆ ಅವರು ಮಾರ್ಚ್ 18ರಂದು ಚುನಾವಣಾ ಆಯೋಗಕ್ಕೆ ಈ ದೂರು ಸಲ್ಲಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆ ರಾಜ್ಯದ ಆಡಳಿತ ಯಂತ್ರವನ್ನು ಬಳಸುವುದನ್ನು ನಿಯಮಗಳು ನಿಷೇಧಿಸುತ್ತವೆ. ನಿರ್ದಿಷ್ಟವಾಗಿ ಇದೇ ಕಾರಣಕ್ಕೆ 1975ರಲ್ಲಿ ಇಂದಿರಾ ಗಾಂಧಿ ಅವರು ಅನರ್ಹಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಐಎಎಫ್ ಹೆಲಿಕಾಪ್ಟರ್‌ಗೆ ಬಾಡಿಗೆ ಪಾವತಿಸಿದ್ದರೆ, ಯಾಕೆ ಐಎಎಫ್ ಹೆಲಿಕಾಪ್ಟರೇ ಅಗತ್ಯವಿತ್ತು ಎಂಬುದನ್ನು ಚುನಾವಣಾ ಆಯೋಗ ನಮಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಾಗ ಚುನಾವಣಾ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು ಎಂದು ಸಾಕೇತ್ ಗೋಖಲೆ ತಿಳಿಸಿದರು.

Read These Next

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...