ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಹಲವು ಮನೆಗಳಿಗೆ ಬೆಂಕಿ; ಓರ್ವನ ಮೇಲೆ ಗುಂಡಿನ ದಾಳಿ

Source: Vb | By I.G. Bhatkali | Published on 7th August 2023, 10:41 AM | National News |

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗುಂಪೊಂದು 15 ಮನೆಗಳಿಗೆ ಬೆಂಕಿ ಹಚ್ಚಿದೆ. ಅಲ್ಲದೆ, ವ್ಯಕ್ತಿಯೋರ್ವನ ಕಾಲಿಗೆ ಗುಂಡು ಹಾರಿಸಿದೆ.

ಈ ಘಟನೆ ಲಂಗೋಲ್ ಗೇಮ್ ಗ್ರಾಮದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಹಲವು ಸುತ್ತು ಅಶ್ರುವಾಯು ಸೆಲ್‌ಗಳನ್ನು ಸಿಡಿಸಿದರು ಎಂದು ಅವರು ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ 45 ವರ್ಷದ ವ್ಯಕ್ತಿಯೋರ್ವನ ಕಾಲಿಗೆ ಗುಂಡು ತಗಲಿ ಗಾಯವಾಗಿದೆ. ಅವರನ್ನು ಇಂಫಾಲದ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಆರ್‌ಐಎಂಎಸ್)ನಲ್ಲಿ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರವಿವಾರ ಬೆಳಗ್ಗೆ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಲಾಗಿದೆ.

ಈ ನಡುವೆ ಇಂಫಾಲ ಪೂರ್ವ ಜಿಲ್ಲೆಯ ಚೆಕ್ಕೊನ್ ಪ್ರದೇಶದಲ್ಲಿ ಕೂಡ ಹಿಂಸಾಚಾರ ಭುಗಿಲೆದ್ದಿದೆ. ಇಲ್ಲಿನ ಅತಿ ದೊಡ್ಡ ವಾಣಿಜ್ಯ ಸಂಕೀರ್ಣಕ್ಕೆ ಬೆಂಕಿ ಹಚ್ಚಲಾಗಿದೆ. ಇದಲ್ಲದೆ, ಕಟ್ಟಡದ ಸಮೀಪದ ಮೂರು ಮನೆಗಳಿಗೆ ಕೂಡ ಬೆಂಕಿ ಹಚ್ಚಲಾಗಿದೆ. ಅನಂತರ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 27 ವಿಧಾನ ಸಭಾ ಕ್ಷೇತ್ರಗಳ ಸಮನ್ವಯ ಸಮಿತಿ ಶನಿವಾರ ಕರೆ ನೀಡಿದ್ದ 24 ಗಂಟೆಗಳ ಸಾರ್ವತ್ರಿಕ ಮುಷ್ಕರದ ನಡುವೆ ಇಂಫಾಲ ಕಣಿವೆಯಲ್ಲಿ ಈ ಹಿಂಸಾಚಾರದ ಘಟನೆಗಳು ನಡೆದಿವೆ. ಈ ಮುಷ್ಕರದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...