ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

Source: ANI | By MV Bhatkal | Published on 23rd October 2022, 6:48 PM | National News | Sports News |

ಮೆಲ್ಬೋರ್ನ್: ಟಿ20 ವಿಶ್ವಕಪ್ 2022ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಗೆಲುವು ಸಾಧಿಸಿದೆ. 

ಮೆಲ್ಬೋರ್ನ್ ನಲ್ಲಿ ನಡೆದ ಗ್ರೂಪ್ 2 ಹಂತದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಬಾರಿಸಿತ್ತು. ಆರಂಭಿಕ ಆಘಾತ ಎದುರಿಸಿದ ಪಾಕಿಸ್ತಾನಕ್ಕೆ ಶಾನ್ ಮಸೂದ್ ಅಜೇಯ 52 ರನ್ ಹಾಗೂ ಇಫ್ತಿಕರ್ ಅಹ್ಮದ್ 51 ರನ್ ಬಾರಿ ತಂಡಕ್ಕೆ ಸ್ಪಲ್ಪ ಚೇತರಿಕೆ ತಂದುಕೊಟ್ಟಿದ್ದು ಪಾಕ್ ಭಾರತಕ್ಕೆ ಗೆಲ್ಲಲು 160 ರನ್ ಗಳ ಗುರಿ ನೀಡಿತು.

160 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಅಜೇಯ 82 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿದರು. ಆರಂಭಿಕರಾದ ಕೆಎಲ್ ರಾಹುಲ್ 4 ಮತ್ತು ರೋಹಿತ್ ಶರ್ಮಾ 4 ರನ್ ಗಳಿಗೆ ಔಟಾಗುವ ಮೂಲಕ ತಂಡಕ್ಕೆ ಆಘಾತ ನೀಡಿದರು. ಈ ವೇಳೆ ತಾಳ್ಮೆಯ ಆಟವಾಡಿದ ಕೊಹ್ಲಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇನ್ನು ಹಾರ್ದಿಕ್ ಪಾಂಡ್ಯ 40 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಪಾಕ್ ಪರ ಮೊಹಮ್ಮದ್ ರಿಜ್ವಾನ್ 4, ಬಾಬರ್ ಅಜಾಂ 0, ಶಬಾಬ್ ಖಾನ್ 5, ಹೈದರ್ ಅಲಿ 2 ಇನ್ನು ಶಾಹಿನ್ ಶಾ ಅಫ್ರಿದಿ 16 ರನ್ ಪೇರಿಸಿದ್ದಾರೆ. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 3 ವಿಕೆಟ್ ಪಡೆದಿದ್ದಾರೆ. ಇನ್ನು ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ತಲಾ 1 ವಿಕೆಟ್ ಪಡೆದಿದ್ದಾರೆ

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್