ದಮನಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ

Source: so news | By MV Bhatkal | Published on 14th March 2019, 12:15 AM | State News | Don't Miss |


ಧಾರವಾಡ: ದಮನಿತ ಮಹಿಳೆಯರು, ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮತ್ತಿತರ ದುರ್ಬಲ ಸಮುದಾಯಗಳಿಗೆ ಮತದಾನ ಜಾಗೃತಿ ಹಾಗೂ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತಿಚಿಗೆ ಧಾರವಾಡದಲ್ಲಿ ಜರುಗಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವಿÃಪ್ ಸಮಿತಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವಿÃಪ್ ಸಮಿತಿ ಅಧ್ಯಕ್ಷರಾಗಿರುವ ಡಾ.ಬಿ.ಸಿ. ಸತೀಶ್ ಮಾತನಾಡಿ, ಮತದಾನವು ಸಂವಿಧಾನದತ್ತವಾದ ಹಕ್ಕು ಮತ್ತು ಕರ್ತವ್ಯವಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಒಂದು ಮತದ ಅಧಿಕಾರವಿದೆ. ಇದು ಬಹಳ ಅಮೂಲ್ಯವಾದ ಮತ್ತು ಪವಿತ್ರವಾದ ಕರ್ತವ್ಯ. ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಿ ವಿವಿಪ್ಯಾಟ್ ಯಂತ್ರದಲ್ಲಿ ನಾವು ಚಲಾಯಿಸಿದ ಮತದ ದೃಢೀಕರಣವನ್ನು ನೋಡಬಹುದು. ಮತದಾನದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು. ಮತಯಂತ್ರದ ಕಾರ್ಯವಿಧಾನಗಳನ್ನು ಪ್ರತಿಯೊಬ್ಬರು ಪ್ರಾತ್ಯಕ್ಷಿಕೆ ಮೂಲಕ ಅರಿತುಕೊಳ್ಳಬೇಕು ಎಂದರು.

ಸುಮಾರು ೩೫೦ ಕ್ಕೂ ಹೆಚ್ಚು ಜನ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಮತಯಂತ್ರಗಳ ಬಳಕೆ ಬಗ್ಗೆ ತಿಳಿದುಕೊಂಡರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆÃಶಕ ಬಸವರಾಜ ವರವಟ್ಟಿ, ದೇವದಾಸಿ ಪುನರ್ವಸತಿ ಯೋಜನೆಯ ಅಧಿಕಾರಿ ಮಧುಸೂಧನ, ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ನಂದಿನಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...