ಬೋಗಾದಿಯ ನಾಗರೀಕರಿಗೆ ಮತ ಜಾಗೃತಿ

Source: so news | By MV Bhatkal | Published on 30th March 2019, 12:40 AM | State News | Don't Miss |

ಮೈಸೂರು:ಬೋಗಾದಿ ಗ್ರಾಮ ಪಂಚಾಯಿತಿಯಲ್ಲಿ ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರ ನಾಗರೀಕ ಪ್ರಭುಗಳಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. 
ಶುಕ್ರವಾರ ಬೋಗಾದಿ ಗ್ರಾಮದ ಮರಿಯಾನಿಕೇತನ ಶಾಲಾ ಮಕ್ಕಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ರೀ ಶಕ್ತಿ ಸಂಘದ ಮಹಿಳೆಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕೃಷ್ಣ ಅವರು ಮತದಾನ ಜಾಗೃತಿ ಕಾಯಕ್ರ್ರಮದಲ್ಲಿ ಭಾಗವಹಿಸಿದ್ದವರಿಗೆ ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. 2019ರ ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಪ್ಪದೇ ಮತದಾನ ಮಾಡಬೇಕು. ನಿಮ್ಮ ಮತ ದೇಶದ ಹಿತ ಕಾಯಲಿದೆ ಆದ್ದರಿಂದ ನಿಮ್ಮ ಅಮೂಲ್ಯವಾದ ಮತವನ್ನು ವ್ಯರ್ಥ ಮಾಡದಿರಿ ಎಂದು ಅವರು ಮನವಿ ಮಾಡಿದರು.
ಯಾವುದೇ ಮತದಾರರು ಮತದಾನ ಮಾಡುವುದನ್ನು ನಿರ್ಲಕ್ಷ್ಯ ಮಾಡದೆ ಅದರ ಮಹತ್ವವನ್ನು ಅರಿತು ಯಾವುದೇ ಆಮಿಷಗಳೆಗೆ ಒಳಗಾಗದೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ತಾಲ್ಲೂಕು ಎನ್ ಆರ್ ಇ ಜಿ ಸಂಯೋಜಕ ಕರೀಗೌಡ, ಬೋಗಾದಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಅಂಗನವಾಡಿ ಮೇಲ್ವಿಚಾರಕಿ ಜಯಮ್ಮ, ಕರೀಗೌಡ, ಶಾಲಾ ಶಿಕ್ಷಕರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಗೃತಿ ಜಾಥಾ:- ಗುರುವಾರ ವರುಣಾ ಹೋಬಳಿ ವರಕೂಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಡಗಲಹುಂಡಿಯಲ್ಲಿ ಕಡ್ಡಾಯ ಮತದಾನದ ಕುರಿತು ಜಾಥಾ ನಡೆಸಿ ನಾಗರೀಕರಿಗೆ ಮತದಾನ ಹಕ್ಕಿನ ಬಗ್ಗೆ ಮನವರಿಕೆ ಮೂಡಿಸಲಾಯಿತು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...