ಮತದಾನ ಮೂಲಕ ಭಾರತಾಂಭೆ ಋಣ ತೀರಿಸಿ: ವೀರೇಂದ್ರ ಹೆಗ್ಗಡೆ

Source: so news | By MV Bhatkal | Published on 3rd April 2019, 12:19 AM | State News | Don't Miss |

 

ಮೈಸೂರು:ದೇಶವನ್ನು ತಾಯಿಯ ರೀತಿ ನೋಡಬೇಕು, ತಾಯಿ ನಮ್ಮನ್ನು ಸಾಕಿ ಸಲಿದು ಪೋಷಣೆ ಮಾಡಿ ಶಿಕ್ಷಣ ನೀಡುತ್ತಾಳೆ ಹಾಗಾಗಿ ತಾಯಿ ಋಣ ತೀರಿಸಲು ತಾಯಿ ಸೇವೆ ಮಾಡಬೇಕು. ಭಾರತಾಂಭೆಯ ಋಣ ನಮ್ಮ ಮೇಲಿದೆ ಅದನ್ನು ತೀರಿಸಲು ಮತ ಚಲಾಯಿಸಬೇಕು. ಉದಾಸಿನ ಅಲಸ್ಯದಿಂದ ಮತದಾನದ ಹಕ್ಕಿನಿಂದ ವಂಚಿತರಾದರೆ ತಾಯಿ ಸೇವೆಯಿಂದ ವಂಚಿತರಾದ ಹಾಗೇ ಉತ್ತಮ ಸರ್ಕಾರ ರಚನೆಯಾಗಲು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಎಂ.ಎಂ.ಕೆ. & ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದ ಎನ್.ಎಸ್.ಎಸ್, ವೈ.ಆರ್.ಸಿ ರೇಂಜರ್ಸ್ ಘಟಕಗಳು ಹಾಗೂ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡುವ ವಿದ್ಯಾರ್ಥಿನಿಯರಿಗೆ ಅಭಿನಂದನೆ ತಿಳಿದರು. ನಿಮ್ಮ ನೆರೆಹೊರೆಯವರಿಗೂ ಮತದಾನ ಮಾಡುವಂತೆ ತಿಳಿಸಿ ಹಾಗೂ ದೇಶ,ಸಮಾಜ ಹಾಗೂ ಹಳ್ಳಿಗಳ ಸುಧಾರಣೆಗೆ ಒಳ್ಳೆಯ ವ್ಯಕ್ತಿಗಳನ್ನು ಹಾರಿಸಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿ. ಕೆ ಅವರು ಮಾತನಾಡಿ ಚುನಾವಣೆ ಆಯೋಗದ ನಿರ್ದೇಶನದಂತೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ನಮಗೆ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳು ಜಾಗೃತಿಗೆ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ನಿರ್ಭೀತಿಯಿಂದ ನೈತಿಕವಾದ ಮತದಾನ ಮಾಡಿ ನಿಮ್ಮ ಮನೆಯ ಅಕ್ಕ ಪಕ್ಕದವರನ್ನು ಮತದಾನ ಮಾಡುವಂತೆ ಪ್ರೆರೇಪಿಸಿ ಎಂದು ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಾಥಾವು ಎಸ್.ಡಿ.ಎಂ ಕಾಲೇಜಿನಿಂದ ಹೋರಟು ಆರ್.ಟಿ.ಒ ವೃತ್ತ, ನ್ಯಾಯಾಲಯ, ಅಶೋಕ ವೃತ್ತದ ಮೂಲಕ ಸಾಗಿತು ಈ ವೇಳೆ ವಿದ್ಯಾರ್ಥಿನಿಯರು ಮತದಾನದ ಪೋಸ್ಟರ್‍ಗಳನ್ನು ಹಿಡಿದು ವೋಟ್ ಪಾರ್ ಇಂಡಿಯಾ ಹಾಗೂ ತಪ್ಪದೇ ಮತದಾನ ಮಾಡಿ, ನೈತಿಕ ಚುನಾವಣೆ ಬೆಂಬಲಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಶಿವನಂದಾ ಮೂರ್ತಿ, ಎಂ.ಎಂ.ಕೆ. & ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಸಾಯಿನಾಥ್ ಮಲ್ಲಿಗೆಮಾಡು, ಪ್ರಾಂಶುಪಾಲರಾದ ಎಂ.ವಿ. ಆಶಾ ಹಾಗೂ ಇನ್ನಿತರರು ಅಧಿಕಾರಿಗಳು ಕಾಲೇಜು ಸಿಬ್ಬಂದಿಗಳು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...