ಮತ ಚಲಾಯಿಸಿ ಸೆಲ್ಫಿ ಕಳುಹಿಸಿ, ಬಹುಮಾನ ಗೆಲ್ಲಿ

Source: so news | By MV Bhatkal | Published on 13th March 2019, 12:56 AM | State News | Don't Miss |

ಧಾರವಾಡ: ೧೮ ವರ್ಷ ಪೂರ್ಣಗೂಂಡ ಯವಕ, ಯುವತಿಯರು ಫಾರಂ ಇದೇ ಮೊದಲ ಬಾರಿಗೆ ಮತದಾನದ ಹಕ್ಕು ಪಡೆದಿರುವ ಅರ್ಹರು ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಿದ ನಂತರ, ನಿಮ್ಮ ಕೈ ಬೆರಳಿನ ಶಾಹಿ ಕಾಣುವ ಹಾಗೆ ಸೆಲ್ಫಿ ತೆಗೆದುಕೊಂಡು ಸ್ವಿÃಪ್ ಸಮಿತಿಗೆ ಕಳುಹಿಸಬೇಕು. ಜಿಲ್ಲಾಡಳಿತದಿಂದ ಅತ್ಯುತ್ತಮ ಸೆಲ್ಫಿಗೆ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಜಿಲ್ಲಾ ಸ್ವಿÃಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ. ಬಿ.ಸಿ. ಸತೀಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವೀಪ್ ಸಮಿತಿ ಅಡಿಯಲ್ಲಿ ಆಯೋಜಿಸಿರುವ ಮತದಾರರ ಜಾಗೃತಿ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಅಂಜುಮನ್ ಮಹಾವಿದ್ಯಾಲಯದ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ, ಮಾತನಾಡಿದರು.

ಮತದಾನ ಪ್ರತಿಯೊಬ್ಬರ ಪವಿತ್ರ ಕರ್ತವ್ಯ ಮತ್ತು ಹಕ್ಕು ಆಗಿದೆ. ಪ್ರಜ್ಞಾವಂತ ಯುವಜನರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಭಾಗೀದಾರರಾಗಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಮೂಲಕ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರೆÃರೇಪಿಸಬೇಕು ಎಂದರು.

ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಪದವಿ ವಿದ್ಯಾಲಯದ ಚುನಾವಣಾ ಸಾಕ್ಷರತಾ ಕ್ಲಬ್‌ನ ರಾಯಭಾರಿ ಸಚಿನ್ ಸಾಲಿಮಠ, ಸದಸ್ಶರಾದ ರಮೇಶ ವಾಲೀಕಾರ, ಬಸವರಾಜ ನಂದಪ್ಪನವರ, ಉಮರ್ ಜಕಾತಿ, ರುದ್ರಪ್ಪ ಮರೇವಾಡ ಅವರು ಸೈಕಲ್ ಜಾಥಾ ಮೂಲಕ ಅಮ್ಮಿನ ಭಾವಿ, ಹಾರೋಬೆಳವಡಿ, ಮನಸೂರ, ಮನಗುಂಡಿ, ಕ್ಯಾರಕೊಪ್ಪ, ನುಗ್ಗಿಕೇರಿ, ಕಣವಿ ಹೊನ್ನಾಪೂರ, ಹುಬ್ಬಳ್ಳಿ ಭೈರಿದೇವರ ಕೊಪ್ಪ, ಸತ್ತೂರಗಳಲ್ಲಿ ಸಂಚರಿಸಿ ಮಾರ್ಚ್ ೧೬ ರಂದು ಸಾಯಂಕಾಲ ೪ ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣ ತಲುಪುವರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆÃಶಕ ಗಜಾನನ ಮನ್ನಿಕೇರಿ, ಕೆ.ಎಮ್. ಶೇಖ್, ಜೆ.ಎನ್. ನಂದನ್, ಪ್ರೊ.ಎಂ.ಎಂ. ಜವಳಿ, ಪ್ರೊ. ಆರ್.ಬಿ. ಸೋನೆಖಾನ್, ಎಂ.ಎಸ್. ಕಿಲ್ಲೇದಾರ ಹಾಗೂ ಕಿಟೆಲ್, ಅಂಜುಮನ್ ಹಾಗೂ ಸರ್ಕಾರಿ ಮಹಿಳಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...