ಮತದಾರರ ಜಾಗೃತಿ ಜಾಥಾ ಮತ್ತು ಮಾನವ ಸರಪಣಿ

Source: SOnews | By Staff Correspondent | Published on 27th March 2023, 7:50 PM | Coastal News |

ಭಟ್ಕಳ: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮಾವಳ್ಳಿ-1 ಹಾಗೂ ಮಾವಳ್ಳಿ-2 (ಮುರ್ಡೇಶ್ವರ) ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಭಟ್ಕಳ ತಾಲೂಕ ಪಂಚಾಯತಿಯ ವತಿಯಿಂದ ಮತದಾರರ ಜಾಗೃತಿ ಜಾಥಾ ಮತ್ತು ಮಾನವ ಸರಪಣಿ ಮೂಲಕ ಮತದಾನದ ಮಹತ್ವವನ್ನು ಸಾರಿ ಹೇಳುವ ಕಾರ್ಯಕ್ರಮ ಜರುಗಿತು.

ಮುರ್ಡೇಶ್ವರದ ಓಲಗ ಮಂಟಪ ಸಮೀಪ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ “ಯುವ ಮತದಾರರು ಮತದಾನದಿಂದ ವಿಮುಖರಾಗುತ್ತಿರುವುದು ಪ್ರಜಾಪ್ರಭುತ್ವದ ಅಪಾಯದ ಮುನ್ಸೂಚನೆಯಂತೆ ತೋರುತ್ತಿದೆ. ಗರಿಷ್ಠ ಮತದಾನ ಪದ್ಧತಿ ನಮ್ಮ ಸಂವಿಧಾನದ ಆಶಯಗಳನ್ನ ಪೂರೈಸುತ್ತದೆ. ಪ್ರಜಾಪ್ರಭುತ್ವದ ಸೌಂದರ್ಯವು ಇದೇ ಆಗಿದೆ. ನಾಗರಿಕರು ಈ ಕುರಿತು ಆಸಕ್ತರಾಗಿ ಮತದಾನದತ್ತ, ಮತದಾರರನ್ನು ಮತಗಟ್ಟೆಗೆ ತರುವಲ್ಲಿ ಸಂಕಲ್ಪ ಮಾಡಬೇಕಾಗಿ ಕರೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಸಹಾಯಕ ನಿರ್ದೇಶಕರಾದ ನಾಗರಾಜ ನಾಯ್ಕ, ಗ್ರಾ.ಪಂ.ದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಕುಮಾರ ಮೊಗೇರ, ಅಪರ್ಣಾ ನಾಯ್ಕ, ಕಾರ್ಯದರ್ಶಿಗಳಾದ  ಮಾರುತಿ ದೇವಾಡಿಗ, ಮಂಜುನಾಥ ಗೊಂಡ, ಅಣ್ಣಾನಾಯ್ಕ, ಗ್ರಾ.ಪಂ. ಸಿಬ್ಬಂದಿಗಳು, ತಾಲೂಕ ಪಂಚಾಯತ ಸಿಬ್ಬಂದಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ ಎದುರಿನ ಬೀದಿಯಲ್ಲಿ ಮಾನವ ಸರಪಣಿ ರಚಿಸಿ ಘೋಷಣೆ ಕೂಗಲಾಯಿತು. ನಂತರ ಮುರ್ಡೇಶ್ವರ ಬೀದಿಗಳಲ್ಲಿ ಜಾಥಾ ನಡೆಸಿ ಜನಜಾಗೃತಿ ಮೂಡಿಸಲಾಯಿತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...