ಮತದಾರ ಪಟ್ಟಿಯಲ್ಲಿನ ಮಾಹಿತಿ ತಿಳಿಯಲು, ತಿದ್ದುಪಡಿ, ಸೇರ್ಪಡೆ ಮತ್ತು ಗುರುತಿನ ಚೀಟಿ ಪಡೆಯಲು ವೊಟರ್ ಹೆಲ್ಪ್ ಲೈನ್ ಮೊಬೈಲ್ ಅಪ್ಲೀಕೇಶನ್ ಬಿಡುಗಡೆ

Source: SO News | By Laxmi Tanaya | Published on 28th September 2021, 7:37 AM | State News | Don't Miss |

ಧಾರವಾಡ : ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು, ಅರ್ಹ ಮತದಾರರ ಹೆಸರುಗಳನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲು, ಮರಣ ಹೊಂದಿದ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು  ಮತದಾರರ ಪಟ್ಟಿಯಿಂದ ಕಡಿಮೆಗೊಳಿಸಲು ಮತ್ತು  ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ತಿದ್ದಪಡಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗವು ಅಧೀಕೃತ ಅಪ್ಲಿಕೇಷನ್ ಮತದಾರರ ಸಹಾಯವಾಣಿ (Voter Helpline Mobile Application)  ಪರಿಚಯಿಸಿದೆ.

ಜಿಲ್ಲೆಯ ಅರ್ಹ ನಾಗರಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 
ಈ ಸಹಾಯವಾಣಿಯನ್ನು Google Play Store  ನಲ್ಲಿ Voter Helpline  ಎಂದು ನಮೂದಿಸಿ   Download  ಮಾಡಿಕೊಳ್ಳಬೇಕು. ನಂತರ ತಮ್ಮ ಮೊಬೈಲ್  ಸಂಖ್ಯೆಯನ್ನು ನಮೂದಿಸಿ Generate O.T.P  ಮೇಲೆ ಕ್ಲಿಕ್ ಮಾಡಿ ನಂತರ  O.T.P  ನಮೂದಿಸಿ,  Register ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಕಾರ್ಯಗಳನ್ನು ಅತ್ಯಂತ ಸರಳವಾಗಿ ತಾವೇ ಮಾಡಿಕೊಳ್ಳಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಧಿಕೃತವಾದ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿ, ನಾಗರಿಕರ ಅನುಕೂಲಕ್ಕಾಗಿ ಬಿಡುಗಡೆ ಮಾಡಿದ್ದು, ಸದುಪಯೋಗಪಡೆಯುವಂತೆ 
 ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...