ಮತದಾರರ ಪಟ್ಟಿ ಪರಿಶೀಲನೆ; ಉತ್ತರ ಕನ್ನಡ ಪ್ರಥಮ ಸ್ಥಾನದಲ್ಲಿ

Source: sonews | By Staff Correspondent | Published on 11th October 2019, 10:56 PM | Coastal News | Don't Miss |

ಪರಿಶೀಲನೆಗೆ ಇನ್ನೂ 4 ದಿನ ಅವಕಾಶವಿದೆ: ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ.

ಕಾರವಾರ: ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆ ಕಾರ್ಯಕ್ರಮದಲ್ಲಿ ಶೇ.27ರಷ್ಟು ಸಾಧನೆ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.
    
ಮತದಾರರ ಪಟ್ಟಿಗೆ ಸೇರ್ಪಡೆ, ತೆಗೆದು ಹಾಕುವುದು, ಪರಿಶೀಲನೆ ಮತ್ತು ದೃಢೀಕರಣ ಹಾಗೂ ಮತದಾರರ ಪಟ್ಟಿಯನ್ನು ತಿದ್ದುಪಡಿ ಕುರಿತಂತೆ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಶೀಲನೆ ಕಾರ್ಯಕ್ರಮ-2020, ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ನಡೆಯುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ 1154745 ಇದ್ದು ಈವರೆಗೆ ಶೇ.27ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಅತಿಹೆಚ್ಚು ಮತದಾರರು ಪರಿಶೀಲನೆ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಗ್ಗಳಿಕೆಗೆ ಉತ್ತರ ಕನ್ನಡ ಜಿಲ್ಲೆ ಪಾತ್ರವಾಗಿದೆ.
    
ಅಕ್ಟೋಬರ್ 11, ಶುಕ್ರವಾರದವರೆಗೆ 308089 ಮತದಾರರು ಮತದಾರರ ಪಟ್ಟಿ ಪರಿಶೀಲನೆ ಮಾಡಿದ್ದು ಶೇ.27ರಷ್ಟು ಪ್ರಗತಿ ಸಾಧಿಸಿ ಪ್ರಥಮ ಸ್ಥಾನದಲ್ಲಿದ್ದು ಇನ್ನೂ ಅಕ್ಟೋಬರ್ 15ರವರೆಗೆ ಕಾಲಾವಕಾಶವಿದ್ದು ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದು ಹಾಕುವ, ಪರಿಶೀಲಿಸುವ ಪ್ರಕ್ರಿಯೆಯನ್ನು ಮಾಡುವ ಮೂಲಕ ಶೇ.100 ಶುದ್ಧ ಮತದಾರರ ಪಟ್ಟಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ತಿಳಿಸಿದ್ದಾರೆ.
    
ಚುನಾವಣಾ ಆಯೋಗ ನಿಗದಿಪಡಿಸಿದ ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್ 15ರೊಳಗೆ ಸಾಮಾನ್ಯ ಸೇವಾ ಕೇಂದ್ರ, ಮತಗಟ್ಟೆ ಅಧಿಕಾರಿ ಅಥವಾ ಮತದಾರರ ನೋಂದಾಣಾಧಿಕಾರಿಗಳ ಕಚೇರಿಯ ಮತದಾರರ ಪೂರಕ ಕೇಂದ್ರ (1950)ರಲ್ಲಿ ಪರಿಶೀಲಿಸಿಕೊಳ್ಳಬಹುದು ಹಾಗೂ ಸೂಕ್ತ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...