ಮತದಾನ ಒಂದು ಬಹುದುಡ್ಡ ಸಾಮಾಜಿಕ ಹೊಣೆಗಾರಿಕೆ: ವಿಜಯ್ ಪ್ರಕಾಶ್

Source: so news | By MV Bhatkal | Published on 17th March 2019, 12:30 AM | State News | Don't Miss |


ಹಾಸನ: ಮತದಾನ ಒಂದು ಬಹುದೊಡ್ಡ ಸಾಮಾಜಿಕ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ|| ಕೆ.ಎನ್. ವಿಜಯಪ್ರಕಾಶ್ ತಿಳಿಸಿದ್ದಾರೆ.
ಹಿಮತ್‍ಸಿಂಗ್ ಕಾಲಿನೆನ್ಸ್ ಸಂಸ್ಥೆಯಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆ ಪ್ರಜಾಪ್ರಭುತ್ವವು ವ್ಯವಸ್ಥೆಯ ಅಡಿಪಾಯ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇದನ್ನು ಇನ್ನಷ್ಟು ಬಲಗೊಳಿಸಬಹುದಾಗಿದೆ ಎಂದರು,
ಏಪ್ರಿಲ್ 18ರಂದು ಲೋಖಸಭಾ ಚುನಾವಣೆ ನಡೆಯಲಿದ್ದು ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಆಮೂಲಕ ಸುಭದ್ರ ಭಾರತದ ನಿರ್ಮಾಣದಲ್ಲಿ ಎಲ್ಲರೂ ಸಹಭಾಗಿತ್ವವನ್ನು ಪ್ರದರ್ಶಸಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ ಅ ಶಿಂದಿಹಟ್ಟಿ, ಜಿಲ್ಲಾ ಸ್ಪೀಪ್ ಸಮಿತಿ ಸದಸ್ಯಕಾರ್ಯದರ್ಶಿ ವಿನೋದ್ ಚಂದ್ರ, ತೋಟಗಾರಿಕ ಇಲಾಖಾ ಹಿರಿಯ ಸಹಾಯ ನಿರ್ದೇಶಕರಾದ ರವಿಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಬಾಲಕೃಷ್ಣ, ಮಾಸ್ಟರ್ ಟ್ರೈನರ್ ಉಬೇದುಲ್ಲಾ, ಸಂಸ್ಥೆಯ ಉಪಾದ್ಯಕ್ಷರುಗಳಾದ ಮಹೇಶ್ ರುದ್ರಪ್ಪ, ವಿನೋದ್ ಕೆ.ಬಿ, ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಸಹಿ ಅಭಿಯಾನ ನಡೆಯಿತು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...