ವಿಟಿಯು ೧೯ ನೇ ಘಟಿಕೋತ್ಸವ: ಮಹಿಮಾ ರಾವ್ ಗೆ ೧೩ ಚಿನ್ನದ ಪದಕ

Source: so news | Published on 12th February 2020, 12:20 AM | State News | Don't Miss |

 


ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಸೃಜಶೀಲತೆಗೆ ಹೆಚ್ಚಿನ ಮಹತ್ವ ಇರುವುದರಿಂದ ಕಲೆ, ವಿಜ್ಞಾನ, ವಾಣಿಜ್ಯ ಅಥವಾ ಔದ್ಯೋಗಿಕ ಹೀಗೆ ಯಾವುದೇ ಕ್ಷೇತ್ರವಿದ್ದರೂ ಹೊಸತನಕ್ಕೆ ತೆರೆದುಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್.ಬಿ.ಎ.)ಯ ಅಧ್ಯಕ್ಷರಾದ ಪ್ರೊ.ಕೆ.ಕೆ.ಅಗರವಾಲ್ ಹೇಳಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನಸಂಗಮ" ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ೧೯ ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದೇಶದ ಭವಿಷ್ಯವು ಎಂಜಿನಿಯರ್ ಗಳು ಹಾಗೂ ತಂತ್ರಜ್ಞರ ಕೈಯಲ್ಲಿರುವುದರಿಂದ ಸದೃಢ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಹೊಸ ಪದವೀಧರರ ಮೇಲಿದೆ. ಪದವಿಯ ಜತೆಗೆ ವೃತ್ತಿನೈಪುಣ್ಯತೆ, ಬದ್ಧತೆಯ ಮೂಲಕ ಸಮಾಜ ಸೇವೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ಕೃತಕ ಬುದ್ಧಿಮತ್ತೆಯ ಕುರಿತು ಬಹುಚರ್ಚೆ ನಡೆಯುತ್ತಿರುವ ಈ ದಿನಗಳಲ್ಲಿ ನಮ್ಮ ಸ್ಥಾನಮಾನವನ್ನು ಮೌಲ್ಯಮಾಪನ ಮಾಡಿಕೊಳ್ಳಲು ಮೆದುಳು ಹೊಂದಿರುವ ಯಂತ್ರದ ಜತೆಗೆ ಹೋಲಿಕೆ ಮಾಡಿಕೊಳ್ಳುವಂತಾಗಿದೆ ಎಂದರು.
ಅಂತರಾಷ್ಟ್ರೀಯ ಸಂಶೋಧನೆ ಪ್ರಕಾರ ಮುಂಬರುವ ದಿನಗಳಲ್ಲಿ ಕೃತಕ‌ಬುದ್ಧಿಮತ್ತೆಯ ಬದಲಾಗಿ ಭಾವನಾತ್ಮಕ ಬುದ್ಧಿಮತ್ತೆ(ಎಮೋಷನಲ್ ಇಂಟಿಲೆಜೆನ್ಸ್)ಗೆ ಬೇಡಿಕೆ ಹೆಚ್ಚಾಗಲಿದೆ.
ಭಾರತದಲ್ಲಿ ಮುಂದಿನ ಮೂರರಿಂದ ಐದು ವರ್ಷಗಳಲ್ಲಿ ಭಾವನಾತ್ಮಕ ಬುದ್ಧಿಮತ್ತೆಯ ಕೌಶಲ್ಯಕ್ಕೆ ೮.೩ ಪಟ್ಟು ಬೇಡಿಕೆ ಹೆಚ್ಚಾಗಲಿದೆ.
ಉದ್ಯೋಗಾವಕಾಶಗಳು ಯಾವಾಗಲೂ ಕಡಿಮೆ ಆಗುವುದಿಲ್ಲ; ಆದರೆ ಅವಕಾಶಗಳನ್ನು ಪಡೆಯಬೇಕಾದರೆ ಹೊಸ ಹೊಸ ಕೌಶಲ್ಯಗಳ ಅಗತ್ಯವಿರುತ್ತದೆ ಎಂದು ಪ್ರತಿಪಾದಿಸಿದ ಪ್ರೊ.ಕೆ.ಕೆ.ಅಗರವಾಲ್ ಅವರು, ಯುವಕರು ತಮ್ಮ ಪದವಿ ಜತೆಗೆ ಸೃಜನಶೀಲತೆ ಮತ್ತು ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಅವರು, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಂಪ್ಯೂಟರ್ ವಿಜ್ಞಾನ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ಬಗೆಯ ನೂತನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಆರಂಭಿಸಲಾಗುತ್ತಿದೆ ಎಂದು ವಿವರಿಸಿದರು.
ರೈಲ್ವೆ ಸಂಶೋಧನಾ ಮತ್ತು ತಂತ್ರಜ್ಞಾನ ಅನ್ವೇಷಣಾ ಕೇಂದ್ರವನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭಿಸುವ ಕುರಿತು ಯೋಜನೆ ರೂಪಿಸಲಾಗುತ್ತಿದೆ.
ದೃಶ್ಯ-ಶೃವಣ ವ್ಯವಸ್ಥೆಯ ಮೂಲಕ ಏಕಕಾಲದಲ್ಲಿ ವಿವಿಧ ಕಡೆಯ ವಿದ್ಯಾರ್ಥಿ ಸಮೂಹಕ್ಕೆ ಶಿಕ್ಷಣ ನೀಡಲು ಹಾಗೂ ಅವರೊಂದಿಗೆ ಸಂವಾದ ನಡೆಸಲು ಅನುಕೂಲವಾಗುವಂತಹ ಇ-ಶಿಕ್ಷಣ ವೇದಿಕೆಯನ್ನು ಕಲ್ಪಿಸಲಾಗಿದೆ.
ಇದಲ್ಲದೇ ಡಿಜಿಟಲ್‌ ಮೌಲ್ಯಮಾಪನ, ಜ್ಞಾನಯಾನ ಫೆಲೋಶಿಪ್ ಆರಂಭ, ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಅಕಾಡೆಮಿ ಸ್ಥಾಪನೆ; ರೈತರಿಗೆ ಅನುಕೂಲವಾಗುವಂತಹ ತರಬೇತಿ ಕೇಂದ್ರ ಸೇರಿದಂತೆ ವಿಶ್ವವಿದ್ಯಾಲಯದ ವತಿಯಿಂದ ಕೈಗೊಳ್ಳಲಾದ ವಿವಿಧ ಯೋಜನೆಗಳ ಕುರಿತು ತಿಳಿಸಿದರು.
ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಹಾಗೂ ಮೇಕ್ ಇನ್ ಇಂಡಿಯಾ ಯೋಜನೆಗಳ ಸಹಭಾಗಿತ್ವದಲ್ಲಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳನ್ನು ಸಂಶೋಧನಾ ಮತ್ತು ತರಬೇತಿ ಕೇಂದ್ರಗಳನ್ನಾಗಿ ರೂಪಿಸಲಾಗುವುದು ಎಂದು ಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದರು.

ಡಾ.ಕೆ.ಶಿವನ್ ಅವರಿಗೆ "ಡಾಕ್ಟರ್ ಆಫ್ ಸೈನ್ಸ್" ಗೌರವ ಪದವಿ:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಅಧ್ಯಕ್ಷರಾದ ಡಾ.ಕೆ.ಶಿವನ್ ಇವರಿಗೆ ವಿಶ್ವವಿದ್ಯಾಲಯದ ವತಿಯಿಂದ "ಡಾಕ್ಟರ್ ಆಫ್ ಸೈನ್ಸ್" ಗೌರವ ಪದವಿಯನ್ನು ಅವರ ಅನುಪಸ್ಥಿತಿಯಲ್ಲಿ ಅವರಿಗೆ ಪ್ರದಾನ ಮಾಡಲಾಯಿತು.
ಅದೇ ರೀತಿ ವಿಶ್ವವಿದ್ಯಾಲಯದ ಪಿ.ಎಚ್.ಡಿ., ಟೆಕ್ನಾಲಜಿ, ಆರ್ಕಿಟೆಕ್ಚರ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್, ಕಂಪ್ಯೂಟರ್ ಅಪ್ಲಿಕೇಷನ್ ಸೇರಿದಂತೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪ್ರದಾನ ಮಾಡಲಾಯಿತು.

ಇದಕ್ಕೂ ಮುಂಚೆ ವಿಶ್ವವಿದ್ಯಾಲಯದ ಆವರಣದಿಂದ ಸಭಾಂಗಣದವರೆಗೆ ಘಟಿಕೋತ್ಸವ ಮೆರವಣಿಗೆ ನಡೆಯಿತು. ಮೌಲ್ಯಮಾಪನ ಕುಲಸಚಿವರಾದ ಪ್ರೊ.ಸತೀಶ್ ಅಣ್ಣಿಗೇರಿ ದಂಡಧಾರಿಯಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕುಲಸಚಿವ ಆನಂದ ಎಸ್. ದೇಶಪಾಂಡೆ, ವಿದ್ಯಾವಿಷಯಕ ಸೆನೆಟ್ ಸದಸ್ಯರು, ಕಾರ್ಯಕಾರಿ ಪರಿಷತ್ ಸದಸ್ಯರು, ಫ್ಯಾಕಲ್ಟಿ ಡೀನ್ ಗಳು ಭಾಗವಹಿಸಿದ್ದರು.

ಮಹಿಮಾ ರಾವ್ ಚಿನ್ನದ ಹುಡುಗಿ:

ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದ 19ನೇ ಘಟಿಕೊತ್ಸವದಲ್ಲಿ ಬಿ.ಇ ವಿಭಾಗದಲ್ಲಿ 46,599, ಬಿ ಆರ್ಕ್ ವಿಭಾಗದಲ್ಲಿ 744, ಎಂ.ಬಿ.ಎ ವಿಭಾಗದಲ್ಲಿ 4,479 ಎಂ.ಸಿ.ಎ ವಿಭಾಗದಲ್ಲಿ 1260, ಎಂ.ಟೆಕ್ ವಿಭಾಗದಲ್ಲಿ 1532, ಎಂ. ಆರ್ಕ್ ವಿಭಾಗದಲ್ಲಿ 38, ಪಿ. ಎಚ್.ಡಿ ವಿಭಾಗದಲ್ಲಿ 620 ಹಾಗೂ ಎಂ. ಎಸ್ಸಿ ಎಂಜಿನಿಯರಿಂಗ್ ವಿಭಾಗದಲ್ಲಿ 21ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಮಂಗಳೂರಿನ ಸೆಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾವ್ ಅವರು 13 ಚಿನ್ನದ ಪದಕ ಪಡೆದುಕೊಳ್ಳುವ ಮೂಲಕ ಚಿನ್ನದ ಹುಡುಗಿಯಾಗಿ ಹೊರಹೊಮ್ಮಿದರು.

ಮೂಡಬಿದರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸನ್ಮತಿ ಪಾಟೀಲ್ ಅವರು 11 ಚಿನ್ನದ ಪದಕ ಪಡೆದುಕೊಂಡರು.

ಬೆಂಗಳೂರಿನ ಬೆಂಗಳೂರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ವಿದ್ಯಾ ಜಿ. ಎಸ್ ಅವರು 7 ಚಿನ್ನದ ಪದಕ ಪಡೆದುಕೊಂಡರೆ ಮೈಸೂರಿನ ಜಿ.ಎಸ್.ಎಸ್.ಎಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ ಆಂಡ್ ಟೆಕ್ನಾಲಜಿ ಪಾರ್ ಉಮೇನ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ದಿವ್ಯ ಚೆಟ್ಟಿ ಅವರು ಹಾಗೂ ಪುತ್ತೂರಿನ ವೀವೆಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ‌ ವಿದ್ಯಾರ್ಥಿನಿ ಸಿಂಧೂರಾ ಸರಸ್ವತಿ ಅವರು ತಲಾ 6 ಚಿನ್ನದ ಪದಕ ಪಡೆದುಕೊಂಡರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...