ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ. ಕರಾವಳಿ ಮುಂಜಾವು ವ್ಯ.ಸಂಪಾದಕರಿಗೆ ಪ್ರಶಸ್ತಿ.

Source: SO News | By Laxmi Tanaya | Published on 12th October 2020, 8:38 PM | Coastal News | Don't Miss |

ಬ್ರಹ್ಮಾವರ : ನನ್ನ ಗುರುಗಳಾದ ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ  ಪ್ರಶಸ್ತಿ ನನಗೆ ಲಭಿಸಿರುವುದಕ್ಕೆ ಅತ್ಯಂತ ಖುಷಿ ತಂದಿದೆ. ನಾನು ಒಂದು ಪತ್ರಿಕೆಯನ್ನು ಹೇಗೆ ನಡೆಸಬೇಕು ಎನ್ನುವುದನ್ನು ಜೀವನದಿಂದ ಕಲಿತುಕೊಂಡಿದ್ದೇನೆ ಎಂದು ಕರಾವಳಿ ಮುಂಜಾವು ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ  ಗಂಗಾಧರ ಹಿರೇಗುತ್ತಿ ಹೇಳಿದರು.

ಭಾನುವಾರ ಬ್ರಹ್ಮಾವರದ ಬಂಟರ ಭವನದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ಅವರು  ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಮಾತನಾಡಿ,  ಮಾಧ್ಯಮಗಳು ಅರಳಿಸುವ ಕೆಲಸ ಮಾಡಬೇಕೇ ಹೊರತು ಕೆರಳಿಸುವ ಕೆಲಸ ಮಾಡಬಾರದು ಎಂದರು.
.
ಪ್ರೀತಿ, ವಿಶ್ವಾಸ, ಏಕತೆ ಪತ್ರಿಕೋದ್ಯಮದಲ್ಲಿ ಅಗತ್ಯ ಎಂದ ಅವರು ಜನಜಾಗೃತಿ ಬಲಗೊಳ್ಳಬೇಕಾದರೆ ಪತ್ರಿಕೆ ಅತೀ ಅಗತ್ಯ ಎಂದು ತಿಳಿಸಿದರು.

ವಕೀಲ ಹಾಗೂ ಸಾಮಾಜಿಕ ಹೋರಾಗಾರ ಸುಧೀರ್ ಕುಮಾರ್ ಮುರೊಳ್ಳಿ ದಿಕ್ಸೂಚಿ ಭಾಷಣ ಮಾಡಿ,  ಮನುಷ್ಯನನ್ನು ಪರಿವರ್ತನೆ ಮಾಡುವ ಕೆಲಸ ಪತ್ರಿಕೆಗಳಿಂದಾಗಬೇಕು. ಸಾಹಿತ್ಯದ ನಂಟು ಸ್ವಲ್ಪಮಟ್ಟಿಗಾದರೂ ಪತ್ರಕರ್ತರಿಗೆ ಇರಬೇಕು. ಖಾಸಗಿ ಬದುಕಿನೊಂದಿಗೆ ಸಮಾಜಸೇವೆಯನ್ನು ಮಾಡಿದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದರು.
ಇದೇ ಸಂದರ್ಭ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ದ.ಕ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‍ನ ಅಧ್ಯಕ್ಷ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಸಂಚಾಲಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ತಾರು ನಾಗರಾಜ್ ವಂದಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ಕಲಾಚಿಗುರು ತಂಡದ ಹಳಿ ಹಂಬ್ಲ್ ಖ್ಯಾತಿಯ ತಂಡದವರಿಂದ ಹ್ವಾಯ್ ಬನಿ ನೆಗ್ಯಾಡ್ವ ಮತ್ತು ಗಾನ ರಸಧಾರೆ ಕಾರ್ಯಕ್ರಮ ನಡೆಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...