ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ

Source: Indian Express | By MV Bhatkal | Published on 13th September 2021, 11:47 PM | National News | Don't Miss |

ನವದೆಹಲಿ: ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಗೆ ವಿಶ್ವಆರೋಗ್ಯ ಸಂಸ್ಥೆಯ ಅನುಮೋದನೆ ವಾರಾಂತ್ಯದಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ.

ಕೋವ್ಯಾಕ್ಸಿನ್ ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸುವ ಲಸಿಕೆಯಾಗಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗಳನ್ನು ಸಂಸ್ಥೆ ಸಲ್ಲಿಸಿದ್ದು, ಔಷಧಗಳ ಗುಣಮಟ್ಟ ನಿಯಂತ್ರಕ  ಕೇಂದ್ರ ಸಂಸ್ಥೆಯ ವಿಷಯ ತಜ್ಞರ ಸಮಿತಿಗೆ ಸಲ್ಲಿಸಿರುವ ವರದಿಯಲ್ಲಿ ಶೇ.78 ರಷ್ಟು ಪರಿಣಾಮಕಾರಿತ್ವವನ್ನು ಸಂಸ್ಥೆ ತೋರಿಸಿದೆ.

ಜೂನ್ ತಿಂಗಳಲ್ಲಿ ಲಸಿಕೆಯ ಡಬ್ಲ್ಯುಹೆಚ್ಒ ತುರ್ತು ಬಳಕೆ ಪಟ್ಟಿ ಪ್ರಕ್ರಿಯೆ ವರದಿ ಸಲ್ಲಿಕೆ ಪೂರ್ವಭಾವಿ ಸಭೆ ನಡೆಸಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಈ ಹಿಂದೆ ಡಬ್ಲ್ಯುಹೆಚ್ಒ ಮುಖ್ಯ ವಿಜ್ಞಾನಿ ಡಾ ಸೌಮ್ಯಾ ಸ್ವಾಮಿನಾಥನ್ ಅವರನ್ನು ಭೇಟಿ ಮಾಡಿ ಕೋವ್ಯಾಕ್ಸಿನ್ ಅನುಮೋದನೆ ವಿಷಯದ ಬಗ್ಗೆ ಚರ್ಚಿಸಿದ್ದರು.

ಡಬ್ಲ್ಯುಹೆಚ್ಒ ಲಸಿಕೆ ವಿಭಾಗದ ಸಹಾಯಕ ಮಹಾನಿರ್ದೇಶಕರಾದ ಮರಿಯಾನ್ನೆ ಸಿಮಾವೊ ಈ ಲಸಿಕೆಗೆ ವಿಶ್ವಸಂಸ್ಥೆ ಮೌಲ್ಯಮಾಪನ ಸಾಕಷ್ಟು ಮುಂದುವರಿದಿದ್ದು ಸೆಪ್ಟೆಂಬರ್ ಮಧ್ಯಭಾಗದಲ್ಲಿ ನಿರ್ಧಾರ ಪ್ರಕಟವಾಗುವ ಸಾಧ್ಯತೆಯನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಐಸಿಎಂಆರ್, ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ ಸಹಯೋಗವಿದೆ.

Read These Next

ಆರ್ಯನ್ ಖಾನ್ ಬಿಡುಗಡೆಗೆ ಎನ್‌ಸಿಬಿಯ ವಾಂಖೆಡೆ, ಮಧ್ಯವರ್ತಿಗಳಿಂದ 25 ಕೋ.ರೂ. ಲಂಚದ ಬೇಡಿಕೆ ಸಾಕ್ಷಿ ಆರೋಪ

ಪ್ರಯಾಣಿಕರ ಹಡಗಿನಲ್ಲಿ ಮಾದಕ ದ್ರವ್ಯ ಪತ್ತೆ ಪ್ರಕರಣದ ಆರೋಪಿಯಾಗಿರುವ ಆರ್ಯನ್ ಖಾನ್ ಬಿಡುಗಡೆಗೆ ಮಾದಕ ದ್ರವ್ಯ ...

ತೈಲ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನ.5ರಂದು ಲಾರಿ ಮಾಲಕರಿಂದ ವಿಧಾನಸೌಧ ಮುತ್ತಿಗೆ

ರಾಜ್ಯ ಸರಕಾರ ಈ ಕೂಡಲೇ ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ನ5ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಫೆಡರೇಷನ್ ಆಫ್ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ...