ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡಲು ನಾವು ಸಿದ್ಧ: ಅಮೆರಿಕಾ

Source: ANI | Published on 6th September 2020, 12:08 AM | National News | Don't Miss |

 

ವಾಷಿಂಗ್ಟನ್: ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾಗುವುದೇ ಆದರೆ, ಸಹಾಯ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ಲಡಾಖ್'ನ ಪ್ಯಾಂಗ್ಯಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ತ್ವೇಷಮಯ ಪರಿಸ್ಥಿತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಭಾರತ-ಚೀನಾ ಗಡಿಯಲ್ಲಿ ಸೃಷ್ಟಿಯಾಗಿರುವ ಉದ್ವಿಗ್ನತೆ ಅಸಹ್ಯಕರವಾದ ಪರಿಸ್ಥಿತಿಯಾಗಿದೆ. ಈ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾದರೆ, ಏನನ್ನಾದರೂ ಮಾಡಲು ನಾವು ಸಿದ್ಧವಿದ್ದೇವೆ. ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡುತ್ತೇವೆಂದು ಹೇಳಿದ್ದಾರೆ. 
ಇದೊಂದು ತುಂಬಾ ಅಸಹ್ಯಕರ ಸನ್ನಿವೇಶವಾಗಿದೆ ಮತ್ತು ಚೀನಾ ಮತ್ತು ಭಾರತಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಮ್ಮಿಂದ ಏನನ್ನಾದರೂ ಮಾಡಲು ಸಾಧ್ಯವಾದರೆ ನಾವು ತೊಡಗಿಸಿಕೊಳ್ಳಲು ಮತ್ತು ಸಹಾಯ ಮಾಡಲು ಇಷ್ಟಪಡುತ್ತೇವೆ. ಆ ಬಗ್ಗೆ ನಾವು ಎರಡೂ ದೇಶಗಳೊಂದಿಗೆ ಮಾತನಾಡುತ್ತೇವೆ ”ಎಂದು ಟ್ರಂಪ್ ತಿಳಿಸಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...