ಶ್ರೀನಿವಾಸಪುರ: ಕೋವಿಡ್ ತಡೆ ನಿಯಮಾನುಸಾರ ಫಲಾನುಭವಿಗಳಿಗೆ ಚೆಕ್‍ ಅನುದಾನ ವ್ಯವಸ್ಥೆ ಮಾಡಲಾಗಿದೆ; ಎನ್.ಹನುಮೇಶ್

Source: Shabbir Ahmed | By S O News | Published on 8th May 2021, 2:30 PM | State News |

ಶ್ರೀನಿವಾಸಪುರ: ರಾಸು ವಿಮಾ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಅನುದಾನದ ಚೆಕ್‍ಗಳನ್ನು ಕೋವಿಡ್ ತಡೆ ನಿಯಮಾನುಸಾರ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ತಿಳಿಸಿದ್ದಾರೆ.

ಇಷ್ಟು ದಿನ  ಫಲಾನುಭವಿಗಳನ್ನು ಕ್ಯಾಂಪ್ ಕಚೇರಿಗೆ ಬರಮಾಡಿಕೊಂಡು ಸಾಮೂಹಿಕವಾಗಿ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತಿತ್ತು. ಆದರೆ ಈಗ ಕೊರೊನಾ ಎರಡನೇ ಅಲೆ ತೀವ್ರವಾಗಿರುವುದರಿಂದ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕಿನ ಜೀಡಿಮಾಕಲಹಳ್ಳಿ ಹಾಲು ಉತ್ಪಾಕದರ ಸಂಘದ ವ್ಯಾಪ್ತಿಯಲ್ಲಿ ಮೃತಪಟ್ಟ ಹಸುವಿನ ಮಾಲೀಕರಿಗೆ ರೂ.60 ಸಾವಿರ, ಗುಂಡಮನತ್ತ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಟ್ಟಡ ನಿರ್ಮಿಸಲು ರೂ.5 ಲಕ್ಷ, ಬೂರಗಮಾಕಲಹಳ್ಳಿ, ಮಚ್ಚುವಾರಿಪಲ್ಲಿ, ದಿಗವ ಮೊರಂಪಲ್ಲಿ, ಅರಳಕುಂಟೆ ಗ್ರಾಮದ ಸಂಘಗಳಿಗೆ ತಲಾ ರೂ. 1.50 ಲಕ್ಷದಂತೆ ರೂ. 11.60 ಲಕ್ಷ ಮೊತ್ತದ ಚೆಕ್‍ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬರುವ ವರೆಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ತಮ್ಮ ಕೆಲಸ ಕಾರ್ಯಗಳಿಗೆ ದೂರವಾಣಿಯಲ್ಲಿ ಸಂಪರ್ಕಿಸುವಂತೆ ಶಿಬಿರ ಕಚೇರಿ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...