ಕೋವಿಡ್ ಬಾಧಿತ ಹಾಗೂ ಸೋಂಕಿತ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಕುರಿತು ವೆಬಿನಾರ್

Source: SO News | By Laxmi Tanaya | Published on 15th September 2021, 8:17 AM | State News | Don't Miss |

ಧಾರವಾಡ : ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಹಾಗೂ ಕೋವಿಡ್ ಬಾಧಿತ ಹಾಗೂ ಸೋಂಕಿತ ಮಕ್ಕಳ ಅನುಕೂಲಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳಿಗೆ ವೆಬಿನಾರ್ ಕಾರ್ಯಕ್ರಮವನ್ನು ಇತ್ತೀಚೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯೋಜಿಸಿತ್ತು. 

ಈ ವೆಬಿನಾರನಲ್ಲಿ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಯಿಂದ  ಕೋವಿಡ್-19 ಹಿನ್ನಲೆಯಲ್ಲಿ ಒದಗಿಸುತ್ತಿರುವ ಯೋಜನೆಗಳನ್ನು ವಿವರಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಒದಗಿಸಲಾಗುತ್ತಿರುವ ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್-19 ದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂ. ಗಳ ಆರ್ಥಿಕ ಸೌಲಭ್ಯ, ಬಾಲಹಿತೈಷಿ ಯೋಜನೆ, ಪಿ. ಎಮ್.ಕೇರ್ಸ ಯೋಜನೆ ಹಾಗೂ ಪ್ರಾಯೋಜಕತ್ವ ಯೋಜನೆಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಕಮಲವ್ವ ಬೈಲೂರ ವಿವರಿಸಿದರು. 

ಜಿಲ್ಲಾ ತನಿಖಾ ಸಮಿತಿಯ ಸದಸ್ಯರಾದ ಶಂಕರ ಹಲಗತ್ತಿ ಮಾತನಾಡಿ, ಮಕ್ಕಳಿಗಾಗಿ ಒದಗಿಸುತ್ತಿರುವ ಎಲ್ಲ ಯೋಜನೆಗಳನ್ನು ಕ್ರೋಢೀಕರಿಸಿ ಒಂದು ಪುಸ್ತಕ ರೂಪದಲ್ಲಿ ಹೊರ ತಂದರೆ ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಬಾಲ್ಯನ್ಯಾಯ ಮಂಡಳಿಯ ಸದಸ್ಯರು, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ಪೋಲಿಸ್ ಇಲಾಖೆ, ಮಕ್ಕಳ ಸಹಾಯವಾಣಿ, ಮಕ್ಕಳ ಪಾಲನಾ ಸಂಸ್ಥೆಯ ಮುಖ್ಯಸ್ಥರು ಭಾಗವಹಿಸಿದ್ದರು. ರಕ್ಷಣಾಧಿಕಾರಿ (ಸಾಂಸ್ಥಿಕ),   ಅಶ್ವಿನಿ ಉಳ್ಳಿಗೇರಿ,  ರಕ್ಷಣಾಧಿಕಾರಿ (ಅಸಾಂಸ್ಥಿಕ) ಪ್ರಕಾಶ ಕೊಡ್ಲಿವಾಡ, ಲೀಗಲ್ ಕಂ ಪ್ರೋಬೇಷನರಿ ಆಫೀಸರ್ ನೂರಜಹಾನ್ ಕಿಲ್ಲೇದಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಲ್ಲ ಸಿಬ್ಬಂದಿ ಭಾಗವಹಿಸಿ ವೆಬಿನಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...