ಬಿಜೆಪಿ ನಾಯಕನ ಸಭೆಯಲ್ಲಿ ಕಾಲ್ತುಳಿತ: ಮೂರು ಸಾವು; ಪಶ್ಚಿಮಬಂಗಾಳದ ಅಸನ್ಸೋಲ್ ನಲ್ಲಿ ಘಟನೆ

Source: Vb | By I.G. Bhatkali | Published on 16th December 2022, 10:47 AM | National News |

ಕೋಲ್ಕತಾ: ಪಶ್ಚಿಮ ಬಂಗಾಳದ ಆಸನ್ಸೋಲ್ ನಲ್ಲಿ ಬುಧವಾರ ನಡೆದ ಹೊದಿಕೆಗಳನ್ನು ವಿತರಿಸುವ ಸಮಾರಂಭವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಧಾರ್ಮಿಕ ಸಂಘಟನೆ 'ಶಿವ ಚರ್ಚೆ'ದ ಆಶ್ರಯದಲ್ಲಿ ಬಿಜೆಪಿ ಕೌನ್ಸಿಲರ್ ಚೈತಾಲಿ ತಿವಾರಿ ಏರ್ಪಡಿಸಿದ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ. ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಮತ್ತು ಶಾಸಕ ಜಿತೇಂದ್ರ ತಿವಾರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಧಿಕಾರಿ ಕಾರ್ಯಕ್ರಮದಿಂದ ಹೋದ ಬಳಿಕ ದುರಂತ ಸಂಭವಿಸಿದೆ.

ಈ ಸಮಾರಂಭಕ್ಕೆ ಅನುಮತಿ ಪಡೆದುಕೊಳ್ಳಲಾಗಿರಲಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ಪೊಲೀಸರು ನಿರಾಕರಿಸಿದ್ದಾರೆ ಎಂದು ತಿವಾರಿ ಹೇಳಿದ್ದಾರೆ. ಪೊಲೀಸರಿಂದ ಅನುಮತಿ ಪಡೆಯದ ಹೊರತಾಗಿಯೂ ಕಾರ್ಯಕ್ರಮವನ್ನು ಏರ್ಪಡಿಸಿರುವುದಕ್ಕಾಗಿ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಟೀಕಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...