ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.71ರಷ್ಟು ಮತದಾನ

Source: sonews | By Staff Correspondent | Published on 28th October 2020, 8:10 PM | Coastal News |

ಕಾರವಾರ: ಬುಧವಾರ ನಡೆದ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಶೇ.71.08 ಮತದಾನವಾಗಿರುತ್ತದೆ. 

ಜಿಲ್ಲೆಯಲ್ಲಿ ಒಟ್ಟು ಸ್ಥಾಪಿಸಲಾದಂತಹ 26 ಮತ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಮತದಾನ ನಡೆದಿದ್ದು, ಬೆಳಗ್ಗೆ 10 ಗಂಟೆ ವೇಳೆಗೆ ಶೇ.10.05ರಷ್ಟು ಮತದಾನವಾಗಿರುತ್ತದೆ, ಮಧ್ಯಾಹ್ನ 12ಕ್ಕೆ ಶೇ.27.47ರಷ್ಟು,  ಮಧ್ಯಾಹ್ನ 2 ಗಂಟೆಗೆ ಶೇ.48.12ರಷ್ಟು ಹಾಗೂ ಸಂಜೆ 4 ಗಂಟೆಗೆ ಶೇ.62.28ರಷ್ಟು ಮತದಾನವಾದರೆ ಅಂತಿಮವಾಗಿ 5 ಗಂಟೆಗೆ 71.08ರಷ್ಟು ಮತದಾನವಾಗಿರುತ್ತದೆ. ಸ್ಥಾಪಿಸಲಾದಂತಹ ಮತಗಟ್ಟೆಗಳಲ್ಲಿ ಮಂಚಿಕೇರಿಯ ಉಪ ತಹಶೀಲ್ದಾರ ಕಾರ್ಯಾಲಯದ ಮತಗಟ್ಟೆಯಲ್ಲಿ ಶೇ.82.67 ಮತದಾನವಾಗುವ ಮೂಲಕ ಜಿಲ್ಲೆಯಲ್ಲಿ ಅತಿಹೆಚ್ಚು ಮತದಾನವಾದ ಮತಗಟ್ಟೆಯಾಗಿರುತ್ತದೆ. ಇದೆರೀತಿ ಅಂಕೋಲಾದ ತಹಶೀಲ್ದಾರ ಕಚೇರಿಯ ಬಲಬಾಗದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಶೇ.59.37ರಷ್ಟು ಮತದಾನವಾಗಿದ್ದು, ಜಿಲ್ಲೆಯಲ್ಲಿ ಅತಿಕಡಿಮೆ ಮತದಾನವಾದ ಮತಗಟ್ಟೆಯಾಗಿರುತ್ತದೆ.

ಜಿಲ್ಲೆಯಲ್ಲಿ 7,113 ಪುರುಷ ಹಾಗೂ 6,034 ಮಹಿಳಾ ಮತ್ತು 1 ಇತರೆ ಮತದಾರರು ಸೇರಿದಂತೆ ಒಟ್ಟು 13,148 ಮತದಾರರಿದ್ದು, ಇದರಲ್ಲಿ 5,519 ಪುರುಷ, 3,826 ಮಹಿಳಾ ಮತ್ತು 1 ಇತರೆ ಮತದಾರರು ತಮ್ಮ ಮತ ಚಲಾಯಿಸುವ ಮೂಲಕ ಒಟ್ಟಾರೆ 9,346 ಮತದಾರರು ಮತ ಚಲಾಯಿಸಿರುತ್ತಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಮತ ಚಲಾಯಿಸಲು ಬಂದ ಮತದಾರರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆಗೆ ಕ್ರಮ ವಹಿಸುವುದರೊಂದಿಗೆ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.

ಯಲ್ಲಾಪುರ ತಹಶೀಲ್ದಾರ ಕಚೇರಿ ಮತಗಟ್ಟೆ ಸಂಖ್ಯೆ:127 ಮತಗಟ್ಟೆಗೆ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ, ಸಂಯೋಜನೆ ಹಾಗೂ ಸಾಂಖಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯಾದ ಶಾಲಿನಿ ರಜನೀಶ್ ಅವರು ಭೇಟಿ ನೀಡಿ ಮತದಾನ ಕಾರ್ಯ ಪರಿಶೀಲಿಸಿದರು. ಅದೇರೀತಿ ಜಿಲ್ಲಾಧಿಕಾರಿ ಹಾಗೂ ಪಶ್ವಿಮ ಪದವೀಧರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಹರೀಶ ಕುಮಾರ ಕೆ, ಅವರು ಕೂಡ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಕಾರ್ಯವನ್ನು ಪರಿಶೀಲಿಸಿದರು.
ಮತ ಚಲಾಯಿಸಲು ಅನುಕೂಲವಾಗುವಂತೆ ಅರ್ಹ ಪದವೀಧರ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿತ್ತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...