ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಗನ್ ತರಬೇತಿಗೆ ಅನುಮತಿ ಕೊಟ್ಟವರು ಯಾರು? ಕಾಂಗ್ರೆಸ್

Source: Vb | By I.G. Bhatkali | Published on 18th May 2022, 7:24 AM | State News | Don't Miss |

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಗನ್ ತರಬೇತಿ ನೀಡಿದ್ದು ಯಾರು? ಯಾವ ಸಂಘಟನೆ? ಅದಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಖಾರವಾಗಿ ಪ್ರಶ್ನಿಸಿದೆ.

ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ ಹಾಗೂ ನಿರ್ಜನ ಪ್ರದೇಶದಲ್ಲಿ ಬಂದೂಕು ತರಬೇತಿ ನೀಡಿರುವ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಈದು ಆರ್ಮ್ಸ್ ಆ್ಯಕ್ಟ್ ಉಲ್ಲಂಘನೆಯಲ್ಲವೇ? ಬಜರಂಗದಳ ಸದಸ್ಯರು ಏಕೆ ಬಂದೂಕು ತರಬೇತಿ ಪಡೆಯುತ್ತಿದ್ದಾರೆ? ಸರಿಯಾದ ಪರವಾನಿಗೆ ಇಲ್ಲದೆ ಬಂದೂಕು ತರಬೇತಿ ಅಪ್ರಾದವಲ್ಲವೆ ?

ಇದು ಆರ್ಮ್ಸ್ ಎಕ್ಟ್-1959, ಉಲ್ಲಂಘನೆಯಲ್ಲವೇ? ಮತ್ತು ಏಕೆ ಬಿಜೆಪಿ ನಾಯಕರು ಅದರಲ್ಲಿ ಬಹಿರಂಗವಾಗಿ ಭಾಗವಹಿಸಿದ್ದರು ಮತ್ತು ಅವರು ಈ ಚಟುವಟಿಕೆಯನ್ನು ಬೆಂಬಲಿಸುತ್ತಾರೆಯೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...