ಬಿಜೆಪಿ ಶಾಸಕರ ವಿರುದ್ಧ ಇಲ್ಲದ ಸಿಬಿಐ ತನಿಖೆ ನನ್ನ ವಿರುದ್ಧ ಮಾತ್ರ ಏಕೆ?: ಡಿ.ಕೆ.ಶಿವಕುಮಾರ್ ಪ್ರಶ್ನೆ

Source: Vb | By I.G. Bhatkali | Published on 21st October 2023, 4:11 PM | State News |

ಬೆಂಗಳೂರು: ರಾಜಕೀಯ ಉದ್ದೇಶಕ್ಕಾಗಿ ಯಡಿಯೂರಪ್ಪ ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರು. ಬಿಜೆಪಿ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಶುಕ್ರವಾರ ನಗರದ ಕುಮಾರಕೃಪ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದರು.

ಸಿಬಿಐನವರು ಶೇ.90ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ, ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದು ಶಿವಕುಮಾರ್ ತಿಳಿಸಿದರು.

ವಿರೋಧ ಪಕ್ಷಗಳು ತಮ್ಮ ವಿರುದ್ಧ ಮಾಡುತ್ತಿರುವ ಟೀಕೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾದಿ-ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೊ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ (ಮಾಧ್ಯಮದವರು) ಬೇರೆಯವರ ಮಾತಿಗೆಲ್ಲಾ ಕಿವಿಗೊಡಬಾರದು ಎಂದು ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...