ಮಹಿಳೆ ಸಶಕ್ತ ಸಾಧಕಿ- ಈಶಪ್ಪ ಭೂತೆ

Source: so news | By MV Bhatkal | Published on 9th March 2019, 12:09 AM | State News | Don't Miss |

ಧಾರವಾಡ: ಇಂದು ವಿಶ್ವದಾದ್ಯಂತ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ.ಮಹಿಳೆಯರಿಗೆ ಅವಕಾಶ ನೀಡಿದರೆ ಏನೆಲ್ಲಾ ಸಾಧಿಸಬಹುದು  ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.  ಮಹಿಳೆಯರು ದುರ್ಬಲರು, ಅಬಲರು ಎಂಬ ಕಾಲ ಇದಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಕೆ .ಭೂತೆ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ದೇವದಾಸಿ ಪುನರ್ವಸತಿ ಯೋಜನೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ಕನ್ನಡ ಕುಲಪುರೋಹಿತ ಆಲೂರ ವೆಂಕಟರಾವ್ ಸಭಾಭವನದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ  ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 ಮಹಿಳೆಯರಿಗೆ ಸಮಾನ ಅವಕಾಶಗಳು ಸಿಗಬೇಕು. ಈಗಾಗಲೇ ಲಕ್ಷಾಂತರ ಮಹಿಳೆಯರು ತಮಗೆ ದೊರೆತ ಅವಕಾಶಗಳನ್ನು ಸರಿಯಾಗಿ ಬಳಸಿಕೊಡು ಸಮರ್ಥವಾಗಿ ನಿಭಾಯಿಸಿ ಯಶಸ್ವಿಯಾಗಿದ್ದಾರೆ. ಇತ್ತಿÃಚೆಗೆ ಧಾರವಾಡದಲ್ಲಿ ಜರುಗಿದ ಅಖಿಲ ಭಾರತ ೮೪ ನೇ ಕನ್ನಡ ಸಾಹಿತ್ಯ ಸಮ್ಮೆÃಳನವನ್ನು ಯಶಸ್ವಿಯಾಗಿ ಸಂಘಟಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರೇ ಉತ್ತಮ ಉದಾಹರಣೆಯಾಗಿದ್ದಾರೆ.ಯಾವ  ಸಮಾಜ, ಕುಟುಂಬ, ಊರಲ್ಲಿ ಮಹಿಳೆಗೆ ಗೌರವ, ಆದ್ಯತೆ ಸಿಗುತ್ತದೆಯೊ ಅಲ್ಲಿ ನೆಮ್ಮದಿ, ಅಭಿವೃದ್ಧಿ ಸಾಧ್ಯವಾಗುತ್ತದೆ. ಧಾರವಾಡ ಜಿಲ್ಲೆಯ ಅನೇಕ ಗ್ರಾಮ ಪಂಚಾಯತಿಗಳಲ್ಲಿ   ಮಹಿಳಾ ಅಧ್ಯಕ್ಷರಿದ್ದಾರೆ ಇದು ಹೆಮ್ಮೆಯ ಸಂಗತಿ. ರಾಜಕೀಯ, ಶಿಕ್ಷಣ, ವಿವಿಧ ರಂಗಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಜಿಲ್ಲೆಯ  ನ್ಯಾಯಾಲಯಗಳಲ್ಲಿ ಸುಮಾರು ೮ ಜನ ಮಹಿಳಾ ನ್ಯಾಯಾಧೀಶರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
.
 ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಅಂತಾರಾಷ್ಟಿಯ ಮಹಿಳೆಯರ ದಿನದ ಸಂದರ್ಭದಲ್ಲಿ ಮಹಿಳೆಯರ ಸಾಧನೆ ಗುರುತಿಸಿ ,ಗೌರವಿಸುವ ಕಾರ್ಯಗಳು ಜಗತ್ತಿನಾದ್ಯಂತ ನಡೆಯುತ್ತಿವೆ. ಮಹಿಳೆಯ ಪ್ರಿತಿಯನ್ನು ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಎಲ್ಲರೂ ಹಂಚಿಕೊಳ್ಳುತ್ತೆವೆ, ಸಮಾಜದಲ್ಲಿ ಮಹಿಳೆಯರ ಹಕ್ಕಿಗಾಗಿ ಹಾಗೂ ಅಭಿವೃದ್ಧಿಗಾಗಿ ಅನೇಕರು  ಹೋರಾಡಿದ್ದಾರೆ. ಪುರುಷರಂತೆ  ಮಹಿಳೆಯರು ಕೂಡಾ ಪೈಲೆಟ್ ಆಗಿದ್ದಾರೆ, ಮಹಿಳೆಯರು ಲಾರಿ ಹಾಗೂ ಮೆಟ್ರೊ ಕೂಡಾ ಚಲಾಯಿಸುತ್ತಿದ್ದಾರೆ. ವಿವಿಧ ಕ್ಷೆತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದರು.

ಕೌಟುಂಬಿಕ ನ್ಯಾಯಾಲಯ ಜಿಲ್ಲಾ ನ್ಯಾಯಾಧೀಶರಾದ ಸಾವಿತ್ರಿ ಕುಜ್ಜಿ ಹಾಗೂ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಡಾ.ಆರ್.ಅನಿತಾ ಮಾತನಾಡಿದರು. ಮಹಿಳೆ ಮತ್ತು ಕಾನೂನು ವಿಷಯ ಕುರಿತು  ಹಿರಿಯ ನ್ಯಾಯವಾದಿಗಳಾದ ಪ್ರಫುಲ್ಲಾ ಎಸ್, ನಾಯ್ಕ್ ಉಪನ್ಯಾಸ ನೀಡಿದರು. ವಿವಿಧ ಕ್ಷೆತ್ರದಲ್ಲಿ ಸಾಧನೆ ಮಾಡಿದವರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ, ಗೌರವಿಸಲಾಯಿತು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಿಣ್ಣನ್ನವರ ಆರ್.ಎಸ್,  ಧಾರವಾಡ ವಕೀಲರ ಸಂಘದ ಅಧ್ಯಕ್ಷ ಆರ್.ಯು. ಬೆಳ್ಳಕ್ಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಮತ್ತಿತರರು ಉಪಸ್ಥಿತರಿದ್ದರು. ಸುಜಾತಾ ಮುರಾರಿ ನಿರೂಪಿಸಿ, ವಂದಿಸಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...