ಭಟ್ಕಳ: ಮೂಡಭಟ್ಕಳ ಬೈಪಾಸ್ ಬಳಿ ರಸ್ತೆ ಅಪಘಾತ; ಉಡುಪಿ ಮೂಲದ ಮಹಿಳೆ ಸಾವು

Source: SOnews | By Staff Correspondent | Published on 17th October 2023, 3:21 PM | Coastal News | Don't Miss |

ಭಟ್ಕಳ : ಮೂವರು ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಮೂಡ್ ಭಟ್ಕಳ ಬೈಪಾಸ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಉಡುಪಿ ಜಿಲ್ಲೆಯ ಬೇಲೂರು ಗ್ರಾಮದ ರೀಟಾ ಕ್ಸೇವಿಯರ್ ಡಿ’ಸೋಜಾ(೫೧) ಎಂದು ಗುರುತಿಸಲಾಗಿದೆ.

ಪತಿ ಹಾಗೂ ಮಗಳೊಂದಿಗೆ ಕಾರಿನಲ್ಲಿ  ಉಡುಪಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮೂಡ್ ಭಟ್ಕಳ ಬೈಪಾಸ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಮೂವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ರೀಟಾ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೂವರೂ ಉಡುಪಿಯ ಬೇಲೂರು ಗ್ರಾಮಗಳಿಗೆ ಸೇರಿದವರು ಎನ್ನಲಾಗಿದೆ.

ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...