ಅಗತ್ಯ ಭದ್ರತೆಯಡಿ ರಾತ್ರಿ ಪಾಳಿಯ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದೆ : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ

Source: sonews | By Staff Correspondent | Published on 24th February 2020, 11:49 PM | Coastal News |

ಮುಂಡಗೋಡ : ಒಂದು ಮುಕ್ಕಾಲು ಕೋಟಿಗೂ ಹೆಚ್ಚು ಇರುವ ಬಡಕಾರ್ಮಿಕರ ಜೀವನಕ್ಕೆ ಶಕ್ತಿ ನೀಡುವ ಕೆಲಸ ಮಾಡುತ್ತೇನೆ ಈಗಾಗಲೇ ತಿದ್ದುಪಡಿ ಮೂಲಕ ಅಗತ್ಯ ಭದ್ರತೆಯಡಿ ರಾತ್ರಿ ಪಾಳಿಯ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಭಾನುವಾರ ತಾಲೂಕಿನ ಮಳಗಿ ಗ್ರಾಮದಲ್ಲಿ ಮೇದಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 

ಬರಲಿರುವ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆ ಸಂಬಂದಿಸಿದ ಹಲವು ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಅವರು ಘೋಷಣೆ ಮಾಡಲಿದ್ದಾರೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಹೇಳಿದರು

ಕಾರ್ಮಿಕ ಇಲಾಖೆ ಕಾನೂನುಗಳಲ್ಲಿ ಸಾಕಷ್ಟು ತಿದ್ದುಪಡಿ ತರಲಾಗಿದ್ದು ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾರ್ಮಿಕ ಇಲಾಖೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಕಾರ್ಮಿಕರಿಗ ನೆಲೆ ಹಾಗೂ ಕಾರ್ಮಿಕ ಕುಟುಂಬಗಳಿಗೆ ಶಾಶ್ವತವಾದ ಯೋಜನೆ ರೂಪಿಸಲಾಗುತ್ತಿದೆ

ಕಾರ್ಮಿಕ ಇಲಾಖೆ ಕಾನೂನುಗಳು ರಾಷ್ಟ್ರಮಟ್ಟದಲ್ಲಿ ತೀರ್ಮಾನವಾಗುತ್ತವೆ ರಾಜ್ಯ ಸರಕಾರದ ಮಟ್ಟದಲ್ಲಿ ಮೇದಾರ ಸಮಾಜದ ಬೇಡಿಕೆಗಳನ್ನು ಈಡೇರಿಸಲ ಅವಕಾಶವಿದ್ದಲ್ಲಿ ಖಂಡಿತವಾಗಿ ಕ್ರಮ ಕೈಗೊಳ್ಳುತ್ತೇನೆ.  ಇಲಾಖೆಯಲ್ಲಿದ್ದಂತಹ 8-10 ಸಾವಿರ ಕೋಟಿ ರೂ ಇಲಾಖೆ ಕಾರ್ಯಕ್ರಮಗಳಿಗೆ ಸದ್ಭಳಿಕೆ ಮಾಡಿಕೊಳ್ಳಲಾಗುವುದು ಕಾರ್ಮಿಕ ಕುಟುಂಬಕ್ಕೆ ನಿಶ್ಚಿತ ಹಾಗೂ ಶಾಶ್ವತವಾದ ಕಾರ್ಯಕ್ರಮ ಕೊಡಲು ಮೊದಲ ಆದ್ಯತೆ ನೀಡುತ್ತೇನೆ ಈ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
 

ಕಾರ್ಮಿಕ ಮತ್ತು ಸಕ್ಕರೆ ಇಲಾಖೆ ನನಗೆ ವಹಿಸಿರುವುದರಿಂದ ಕಾರ್ಮಿಕರ ಶ್ರಯೋಭಿವೃದ್ದಿ ಜತೆ ಜತೆಗೆ  ಕಬ್ಬು ಬೆಳಗಾರ ರೈತರ ಸಮಸ್ಯಗಳಿಗೂ ಸ್ಪಂದಿಸಿ ಇಬ್ಬರಿಗೂ ನ್ಯಾಯ ಒದಗಿಸುತ್ತೇನೆ. ಕಾರ್ಮಿಕ ಇಲಾಖೆಯ ಅಧಿಕಾರ ವಹಿಸಿಕೊಂಡು ಕೆವಲ 15 ದಿನಗಳಾಗಿವೆ ಇಲಾಖೆಗೆ ಮತ್ತಷ್ಟು ಜೀವ ತುಂಬುವ ಕೆಲಸ ಮಾಡಲಾಗುವುದು  ಎಂದು ಅವರು ಹೇಳಿದರು

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...