ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಷ್ಟ್ರಧ್ವಜ ತಯಾರಿಸಿ ಪೂರೈಸುವ ಕೆಲಸ ತೊಡಗಿಕೊಂಡಿರುವ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆ

Source: S O News/Press release | By I.G. Bhatkali | Published on 6th August 2022, 6:07 PM | Coastal News |

ಕಾರವಾರ :  ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರಧ್ವಜ ತಯಾರಿಸಿ ಒದಗಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯು ಸಿದ್ಧತೆಯನ್ನು ಮಾಡಿಕೊಂಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ನಿರ್ದೇಶನದ ಮೇರೆಗೆ ಅಭಿಯಾನಕ್ಕೆ ಮೆರಗು ಸಿಕ್ಕಿದ್ದು, ಉತ್ತರ ಕನ್ನಡ ಜಿಲ್ಲೆಯ  ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಜಿಲ್ಲೆಯ ಪ್ರತಿ ಮನೆ, ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವ ನಿಟ್ಟಿನಲ್ಲಿ ಧ್ವಜವನ್ನು ತಯಾರಿಸಿ ಪೂರೈಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. 

ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ವಿಶೇಷವಾಗಿ ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವ ಆಚರಿಸುವ ಅಂಗವಾಗಿ ಪ್ರತಿ ಮನೆ ಮನೆ ಮೇಲೂ ರಾಷ್ಟ್ರಧ್ವಜವನ್ನು ಆಗಸ್ಟ್ 13 ರಿಂದ 15 ರ ವರೆಗೆ ಹಾರಿಸುವ ಮೂಲಕ ದೇಶಪ್ರೇಮ, ದೇಶಭಕ್ತಿಯನ್ನು ಮೆರೆಯುವ ಉದ್ದೇಶ ಹೊಂದಿದೆ. 

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಜೀವಿನಿ ಸ್ವ ಸಹಾಯ ಮಹಿಳಾ ಒಕ್ಕೂಟದ ಸದಸ್ಯರು ತಯಾರಿಸಿರುವ ರಾಷ್ಟ್ರಧ್ವಜವನ್ನು ಎಲ್ಲಾ ತಾಲೂಕುಗಳ ಪ್ರತಿ ಗ್ರಾಮ ಪಂಚಾಯತಿಗಳಿಗೆ 260 ರಂತೆ ಜಿಲ್ಲೆಯಾ 229 ಪಂಚಾಯತಿಗಳಿಗೆ ಒಟ್ಟಾರೆ 60 ಸಾವಿರ ಧ್ವಜಗಳನ್ನು ತಯಾರಿಸಿ ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ.

ಜಿಲ್ಲೆಯಲ್ಲಿ ರಾಷ್ಟ್ರಧ್ವಜವನ್ನು ತಯಾರಿಸುವ ಕಾರ್ಯವನ್ನು ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಕಾತ್ಯಾಯಣಿ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟ ಮತ್ತು ಕುಮಟಾ ತಾಲೂಕಿನ ಕಾಗಲ ಗ್ರಾಮದ ಮಕರಂದ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟಗಳ ಮೂಲಕ ತಯಾರಿಸಲಾಗುತ್ತಿದ್ದು. ಪ್ರತಿ ಒಕ್ಕೂಟಗಳಲ್ಲಿ 85 ರಿಂದ 90 ಮಹಿಳಾ ಸದಸ್ಯರು ರಾಷ್ಟ್ರಧ್ವಜ ತಯಾರಿಕೆಯಲ್ಲಿ ನಿರತರಾಗಿದ್ದಾರೆ ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಗೆ ರಾಷ್ಟ್ರಧ್ವಜ ಪೂರೈಕೆದಾರರಾಗಿ ಆಯಾ ತಾಲೂಕಿನ ಒಂದು ಗ್ರಾಮ ಪಂಚಾಯತ ಮಟ್ಟದ ಒಕ್ಕೂಟವನ್ನು ನೋಡಲ್ ಆಗಿ ಆಯ್ಕೆ ಮಾಡಿ,  ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಧ್ವಜಗಳನ್ನು ಪೂರೈಸುವ ಜವಾಬ್ದಾರಿಯನ್ನು ನೀಡಲಾಗಿದೆ. ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ “ರಾಷ್ಟ್ರಧ್ವಜ ತಯಾರಿಸುವ ಮೂಲಕ ದೇಶ ಸೇವೆ ಮಾಡಲು ಮತ್ತು ತನ್ಮೂಲಕ ದೇಶಪ್ರೇಮ ಮೆರೆಯಲು ತಮಗೊಂದು ಸದಾವಕಾಶ ಸಿಕ್ಕೆದೆ” ಎಂದು ಒಕ್ಕೂಟದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ.

ಸಿಇಓ  ನೋಟ್:
“ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಕಲ ಸಿದ್ಧತೆ ಮಾಡಿಕೊಂಡಿದೆ. 2022 ರ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ತಯಾರಿಸಿದ ರಾಷ್ಟ್ರಧ್ವಜವನ್ನು ಪ್ರತಿ ಮನೆ ಮನೆಗಳ ಮೇಲೂ ಹಾರಿಸುತ್ತಿರುವುದು ವಿಶೇಷವಾಗಿದೆ ಈ ನಿಟ್ಟಿನಲ್ಲಿ  ಎಲ್ಲರೂ ರಾಷ್ಟ್ರೀಯ ಭಾವೈಕ್ಯತೆ ಹಾಗೂ ರಾಷ್ಟ್ರಪ್ರೇಮವನ್ನು ಮೆರೆಯಬಹುದಾಗಿದೆ. 

Read These Next

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‍ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಉತ್ತಮವಾದ ಯೋಜನೆ

ಕಾರವಾರ  : ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ...

ಜಿಲ್ಲೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ರಾಷ್ಟ್ರಕ್ಕೆ ವಿಸ್ತರಣೆಯಾಗಬೇಕು : ಸಚಿವ ಸುನೀಲ್

1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ ಅಭಿವೃದ್ದಿಗೆ ಹೋಲಿಸಿದಲ್ಲಿ, ಉಡುಪಿ ಜಿಲ್ಲೆ 20 ವರ್ಷ ಮುಂದಿದ್ದು, ಸ್ಟಾರ್ಟಪ್ ...