ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

Source: Vb | By I.G. Bhatkali | Published on 21st September 2023, 3:48 PM | National News |

ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯು ಬುಧವಾರ 452-2 ಮತಗಳ ಭಾರೀ ಬಹುಮತದಿಂದ ಅಂಗೀಕರಿಸಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಒದಗಿಸಲಿರುವ ಮಸೂದೆಯು ಈಗ ಚರ್ಚೆ ಮತ್ತು ಮತದಾನಕ್ಕಾಗಿ ರಾಜ್ಯಸಭೆಗೆ ಸಲ್ಲಿಕೆಯಾಗಲಿದೆ. ರಾಜ್ಯಸಭೆಯಲ್ಲಿಯೂ ಅದು ಸುಲಭವಾಗಿ ಅಂಗೀಕರಿಸಲ್ಪಡುವ ವ್ಯಾಪಕ ನಿರೀಕ್ಷೆಯಿದೆ.

ಈ ನಡುವೆ ಬುಧವಾರ ಮಸೂದೆಯ ಮೇಲೆ ಕಾವೇರಿದ ಚರ್ಚೆಗಳಿಗೆ ಲೋಕಸಭೆಯು ಸಾಕ್ಷಿಯಾಯಿತು.

ಹಲವಾರು ಷರತ್ತುಗಳಿಂದ ಕೂಡಿರುವ 'ನಕಲಿ ' ಮಸೂದೆಯನ್ನು ಸರಕಾರವು ಮಂಡಿಸಿದ್ದು, ಮುಂದಿನ 10 ವರ್ಷಗಳಲ್ಲಿಯೂ ಅದನ್ನು ಜಾರಿಗೊಳಿಸುವುದು ಅಸಾಧ್ಯ ಎಂದು ಕೆಲವು ಪ್ರತಿಪಕ್ಷಗಳು ಆರೋಪಿಸಿದವು.

ನೀವು ಇಷ್ಟೊಂದು ವಿಳಂಬವನ್ನು ಮಾಡಿದ್ದು ಏಕೆ? 2014ರಲ್ಲಿ ಅಧಿಕಾರಕ್ಕೆ ಬಂದಾಗಲೇ ಏಕೆ ಮಾಡಿರಲಿಲ್ಲ? ನೀವು ಜನತೆಗೆ ಏನನ್ನು ಸಾಬೀತುಗೊಳಿಸಲು ಪ್ರಯತ್ನಿಸುತ್ತಿದ್ದೀರಿ? ಇದು ಹ್ಯಾಟ್‌ನಿಂದ ಮೊಲವನ್ನು ಹೊರತೆಗೆದು ದೇಶದ ಮುಂದಿಡುವ ತಂತ್ರವೇ ಎಂದು ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗಿಯಾದ ಟಿಎಂಸಿಯ ಮೊದಲ ಸದಸ್ಯೆ ಕಾಕೋಲಿ ಘೋಷ್ ದಸ್ತಿದಾರ್ ಪ್ರಶ್ನಿಸಿದರು. ದಕ್ಷಿಣ ಭಾರತದ ಹಲವಾರು ಸಂಸದರೂ ಕ್ಷೇತ್ರ ಮರುವಿಂಗಡಣೆ ಅಥವಾ ವಿವಿಧ ರಾಜ್ಯಗಳಲ್ಲಿ ಜನಸಂಖ್ಯೆಯಲ್ಲಿ ಬದಲಾವಣೆಗಳಿಗೆ ಅನುಗುಣವಾಗಿ ಲೋಕಸಭಾ ಸ್ಥಾನಗಳ ಮರು ಹಂಚಿಕೆಯಂತಹ ಷರತ್ತುಗಳಿಂದಾಗಿ ಮಸೂದೆಯ ಜಾರಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು.

ಚರ್ಚೆಯಲ್ಲಿ ಪಾಲ್ಗೊಂಡಿದ್ದ ಗೃಹಸಚಿವ ಅಮಿತ್ ಶಾ ಅವರು,ಮುಂದಿನ ಸರಕಾರವು ಚುನಾವಣೆಗಳ ಬಳಿಕ ತಕ್ಷಣವೇ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ತಿಳಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...