ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಪೊಲೀಸರಿಗೆ ವರ್ಕ್ ಪ್ರಮ್ ಹೋಮ್ : ಶಶಿಕುಮಾರ್.

Source: SO News | By Laxmi Tanaya | Published on 18th April 2021, 11:01 PM | State News | Don't Miss |

ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೊಲೀಸರಿಗೆ ಇಲಾಖೆಯಿಂದ ವರ್ಕ್ ಪ್ರಮ್ ಹೋಮ್ ನೀಡಲು ವಿನಾಯಿತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

ಕಳೆದ ಬಾರೀ ಕೊರೋನಾ ಸಂದರ್ಭದಲ್ಲಿ ಮಹಿಳಾ ಪೊಲೀಸರು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದರು. ಹೀಗಾಗಿ  ಗರ್ಭಧಾರಣೆಯ ನಂತರದ ಹಂತಗಳಲ್ಲಿರುವ ಎಲ್ಲಾ ಗರ್ಭಿಣಿಯರು ಮತ್ತು ತಮ್ಮ ಮಕ್ಕಳಿಗೆ ಆಹಾರವನ್ನ  ನೀಡುವವರಿಗೆ ಕಚೇರಿಗೆ ಬರಲು ವಿನಾಯಿತಿ ನೀಡಲಾಗಿದೆ.

  ಈ ತಿಂಗಳ ಅಂತ್ಯದವರೆಗೆ ಮನೆಯಿಂದ ಕೆಲಸ ಮಾಡಲು ಅನುಮತಿ ಇದೆ.  ನಂತರದ ದಿನಗಳಲ್ಲಿ ಸಮಯ ಮತ್ತು ಸಂದರ್ಭಗಳ ಅಗತ್ಯಕ್ಕೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

 ಯಾವುದೇ ಕಾರಣಕ್ಕೂ ಅವರು ಕೇಂದ್ರಸ್ಥಾನ ಬಿಟ್ಟು ಹೋಗುವಂತಿಲ್ಲ. ಪ್ರಧಾನ ಕಚೇರಿಯಲ್ಲಿ ಅವರ ಉಪಸ್ಥಿತಿಯು ಪ್ರತಿದಿನವೂ ದೃಢಿಕರಿಸಲ್ಪಡುತ್ತದೆ.  ಯಾವುದೇ ತುರ್ತು ಸಂದರ್ಭ ಬಂದಾಗ ಅವರನ್ನು ಮತ್ತೆ ಕೆಲಸಕ್ಕೆ ಕರೆಯಲಾಗುತ್ತದೆ. ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿನಂತಿಯ ಮೇರೆಗೆ ಒಟ್ಟು 34  ಮಹಿಳಾ ಪೊಲೀಸರಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...