ಬಾಲ್ಯ ವಿವಾಹವನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂ ಎಲ್ ರಘುನಾಥ್

Source: sonews | By Staff Correspondent | Published on 25th September 2020, 6:01 PM | State News |

ಕೋಲಾರ :  ಅಪ್ರಾಪ್ತ ವಯಸ್ಸಿನ ಮಕ್ಕಳ ಬಾಲ್ಯ ವಿವಾಹವನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಕಲೆಕ್ಟಿವ್‌ ಆ್ಯಕ್ಷನ್ ನೆಟ್ ವರ್ಕ್, ಚೈಲ್ಡ್ ರೈಟ್ಸ್ ಟ್ರಸ್ಟ್, ಅರ್ಪಣಂ ಸಂಸ್ಥೆ ಬಾಗೇಪಲ್ಲಿ. ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯ ಮಹಿಳೆಗೆ 18 ವರ್ಷ ಹಾಗೂ ಪುರುಷನಿಗೆ 21 ವರ್ಷದ ನಂತರದಲ್ಲಿ ಮದುವೆಯಾಗಲು ಕಾನೂನಿನಲ್ಲಿ ಅವಕಾಶವಿದೆ . ಈ ವಯಸ್ಸಿಗೆ ಮೊದಲು ಮದುವೆಯಾದರೆ ಅದು ಬಾಲ್ಯ ವಿವಾಹವಾಗುತ್ತದೆ ಎಂದರು. ಸಾಮೂಹಿಕ ವಿವಾಹಗಳ ಸಂದರ್ಭದಲ್ಲಿ, ಆರ್ಥಿಕ ತೋಂದರೆ, ಹೀಗೆ ವಿವಿಧ ರೀತಿಯ ತೊಂದರೆಗಳಿಂದ ಬಾಲ್ಯ ವಿವಾಹಗಳು ಆಗುತ್ತಿವೆ. ಹೆಣ್ಣು ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗೆ ವಿವಿಧ ಕಾನೂನುಗಳನ್ನು ರೂಪಿಸಲಾಗಿದೆ. ಶಿಕ್ಷಣವು ಮೂಲಭೂತ ಹಕ್ಕಾಗಿದೆ ಆದರೆ ಆಸ್ತಿಯ ಹಕ್ಕನ್ನು ಸಾಂವಿಧಾನಿಕ ಹಕ್ಕಾಗಿ ಗುರುತಿಸಲ್ಪಟ್ಟಿದೆ . ಶಿಕ್ಷಣವನ್ನೆ ಆಸ್ತಿಯನ್ನಾಗಿ ಮಾಡಿ ಅಂದರೆ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದರು.

18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ವಿವಾಹ ನೆರವೇರಿಸಿದ್ದಲ್ಲಿ ಕಾನೂನು ಚೌಕಟ್ಟಿನಲ್ಲಿ ಇದು ಅಪರಾಧವಾಗಿದ್ದು, ಕಾನೂನಿನ ಮಾನ್ಯತೆ ಇರುವುದಿಲ್ಲ. ಬಾಲ್ಯವಿವಾಹ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಇದ್ದಲ್ಲಿ ತಕ್ಷಣ ಅಂತಹ ಬಾಲ್ಯವಿವಾಹವನ್ನು ತಡೆಯಬೇಕು. ಮಹಿಳೆಯರಿಗೆ ಎಲ್ಲಾ ರಂಗಗಳಲ್ಲೂ ಶೇ 33 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು . ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ವಂಚಿತ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಣವನ್ನು ನೀಡಬೇಕು . ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಕ್ಷಣ ವಂಚಿತ ಮಕ್ಕಳ ಬಗ್ಗೆ ಗಣತಿ ( ಸಮೀಕ್ಷೆ ) ನಡೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು . ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್ ಗಂಗಾಧರ್ ಅವರು ಮಾತನಾಡಿ , ಜಿಲ್ಲೆಯಲ್ಲಿ ಕರೋನಾ ಸಂದರ್ಭದಲ್ಲಿ ಹಲವಾರು ಬಾಲ್ಯ ವಿವಾಹಗಳು ಆಗಿರುವುದು ಮಾಹಿತಿ ಇದ್ದು, ಇನ್ನು ಮುಂದೆ ಆಗುವ ಬಾಲ್ಯವಿವಾಹಗಳನ್ನು ತಡೆಯಬೇಕಿದೆ. ಬಾಲ್ಯವಿವಾಹಗಳನ್ನು ತಡೆಗಟ್ಟುವ ಉದ್ದೇಶ ಸಮಾಜವು ಸದೃಢತೆ ಕಡೆಗೆ ಸಾಗುವುದು ಎಂದರು . ಕೋವಿಡ್ 19 ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ . ಅದರಂತೆಯೇ ಗ್ರಾಮೀಣ ಮಟ್ಟದಲ್ಲಿ ಅಗುವಂತ ಬಾಲ್ಯವಿವಾಹಗಳನ್ನು ತಡೆಗಟ್ಟಲು ಸ್ಥಳೀಯ ಅಧಿಕಾರಿಗಳು ಕ್ರಮ ವಹಿಸಬೇಕು . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು. ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ವಿವಿಧ ಕಾನೂನುಗಳನ್ನು ಜಾರಿಗೆ ತಂದಿದೆ. ಯಾರೇ ಆದರೂ ಬಾಲ್ಯವಿವಾಹ ನಡೆಯುತ್ತಿದೆ ಎಂದು ಕರೆ ಮಾಡಿದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಬಾಲ್ಯವಿವಾಹ ಆಗುತ್ತಿದ್ದಲ್ಲಿ ಅಂತಹ ಬಾಲ್ಯವಿವಾಹವನ್ನು ಅಧಿಕಾರಿಗಳು ತಡೆಯಬೇಕು ಎಂದ ಅವರು ಮಕ್ಕಳ ಹಕ್ಕುಗಳ ಹಿತರಕ್ಷಣೆಗೊಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕಾನೂನು ಸೇವಾ ಅಧಿಕಾರಿಯನ್ನು ನೇಮಿಸಲಾಗಿದೆ ಎಂದರು . ಜಿಲ್ಲೆ ವ್ಯಾಪ್ತಿಯಲ್ಲಿ ಯಾವುದಾದರೂ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ 8762002393 ಈ ಸಂಖ್ಯೆಗೆ ಕರೆಮಾಡಿ ತಿಳಿಸಿದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು .

ಇದೇ ಸಂದರ್ಭದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟುವ ಕುರಿತು ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು . ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎಂ ಜಿ ಪಾಲಿ, ಚೈಲ್ಡ್ ರೈಟ್ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರಾದ ವಾಸುದೇವ ಶರ್ಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಚೌಡಪ್ಪ , ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ರಘುಪತಿ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ರಮೇಶ್ , ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಕೆ ಎಸ್ ಗಣೇಶ್ , ಗಮನ ಮಹಿಳಾ ಸಮೂಹದ ಶಾಂತಮ್ಮ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಉಪಸ್ಥಿತರಿದ್ದರು .

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...