ವಿಶ್ವ ವಿಕಲಚೇತನರ ದಿನಾಚರಣೆ. ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ

Source: SO News | By Laxmi Tanaya | Published on 28th November 2022, 9:14 PM | State News | Don't Miss |

ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಯುವಜನ ಸೇವಾ ಮತ್ತು ಕ್ರೀಡೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಮತ್ತು ಆಟೋಟ  ಸ್ಪರ್ಧಾ ಕಾರ್ಯಕ್ರಮ ಸೋಮವಾರ ನಡೆಯಿತು. 

        ನಗರಸಭೆ ಅಧ್ಯಕ್ಷ ಅನಿತಾ ಪೂವಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ರೈ, ಸ್ವಾಮಿ ವಿವೇಕಾನಂದ ಯುವ ಸಂಘಟನೆಯ ಸಲಹಾ ಸಮಿತಿ ಸದಸ್ಯರಾದ ಅಜಯ್ ಸೂದ್, ಆಪರ್ಚುನಿಟಿ ಶಾಲೆಯ ಮುಖ್ಯೋಪಾಧ್ಯಾಪಕಿ ಗೀತಾ ಶ್ರೀಧರ, ಕೊಡಗು ವಿದ್ಯಾಲಯದ  ಮುಖ್ಯೋಪಾಧ್ಯಾಯ ಮಹೇಶ್ವರ, ಕೊಡಗು ಜಿಲ್ಲಾ ವಿಕಲಚೇತನರ ಸಂಘದ ಈಶ್ವರಿ, ಜಿಲ್ಲಾ ದಿವ್ಯಂಗ ಸಂಘ ಸಂಪನ್ಮೂಲ ವ್ಯಕ್ತಿಗಳಾದ ಸುನಿಲ್ ಮತ್ತು ನವೀನ, ಸಗಯ ಮೇರಿ, ಸಂತ ಮೈಕಲರ, ಹಾಕತ್ತೂರು ಮತ್ತು ಮಕ್ಕಂದೂರು ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

      ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಗುಂಡು ಎಸೆಯುವ ಮೂಲಕ ಆಟೋಟ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಗುರಿ ಛಲ ಇದ್ದಲ್ಲಿ ಸಾಧನೆ ಸಾಧ್ಯ ಎಂದು ತಿಳಿಸಿದರು.

         ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷ ರವೀಂದ್ರ ರೈ ಅವರು ಮಾತನಾಡಿ,  ಯಶಸ್ಸಿನ ಹಾದಿಯಲ್ಲಿ ಸಾಗಬೇಕಾದರೆ ಒಂದೊಳ್ಳೆಯ ಗುರಿ ಛಲ ಇರಬೇಕು, ಸಂಸ್ಥೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.   

       ಶಿಶು ಅಭಿವೃದ್ಧಿ ಅಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಜಿಲ್ಲಾ, ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಯಶಸ್ವಿಯ ದಾರಿಯತ್ತ ನಡೆಯುತ್ತಿರುವ ಜಿಲ್ಲೆಯ ಸ್ಪರ್ಧಿಗಳನ್ನು ಪ್ರೋತ್ಸಾಹಿಸಿ ಮಹಿಳೆಯರನ್ನು ಭಾಗವಹಿಸಲು ಸ್ಪೂರ್ತಿ ತುಂಬಿದರು. ಸಿಕ್ಕ ಅವಕಾಶಗಳನ್ನು ತಪ್ಪದೇ ಬಳಸಿಕೊಳ್ಳಲು ಕರೆ ನೀಡಿದರು. 

       ಕಾಳು ಹೆಕ್ಕುವುದು, 50 ಮೀಟರ್ ಓಟ, ಬಾರದ ಗುಂಡೆಸೆತ, 100 ಮೀಟರ್ ಓಟ, ಸಂಗೀತ ಸ್ಪರ್ಧೆ, ನಗುವಿನೊಂದಿಗೆ  ನಡಿಗೆ, ಒಳಗೊಂಡಂತೆ ಸುಮಾರು 15 ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮೂರು ವರ್ಷದಿಂದ ಮೇಲ್ಪಟ್ಟ ಎಲ್ಲಾ ಸ್ಪರ್ಧಿಗಳು ಭಾಗವಹಿಸಿದ್ದರು. ಒಟ್ಟು ನೂರು ಸ್ಪರ್ಧಿಗಳು ಭಾಗವಹಿಸಿದ್ದು 75 ಸ್ಪರ್ಧಿಗಳು ವಿಜೇತರಾದರು. 

       ತಾಲೂಕು ಎಂಡಬ್ಲ್ಯೂ  ರಾಜೇಶ್ ಅವರು ಕಾರ್ಯಕ್ರಮದ ಪೂರ್ಣ ಯಶಸ್ವಿಗೆ ಶ್ರಮಿಸಿರುತ್ತಾರೆ. ದಮಯಂತಿ ಪ್ರಾರ್ಥಿಸಿದರು. ಸಹಾಯಕ ಶಿಶು ಅಧಿಕಾರಿ ಕೆ. ಶೀಲ, ಕುಮಾರಿ ಶಿಲ್ಪ ಅವರು ವಂದಿಸಿದರು. ಜಿಲ್ಲಾ ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಮಹಿಳಾ ಕಲ್ಯಾಣಾಧಿಕಾ ಕೇಶನಿ ಎಸ್.ಆರ್. ಅವರು ನಿರೂಪಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...