ಡಿಹೆಚ್‍ಓ ಕಚೇರಿಯಲ್ಲಿ ವಿಶ್ವ ಜನಸಂಖ್ಯಾ ದಿನ ಆಚರಣೆ

Source: SO News | By Laxmi Tanaya | Published on 11th July 2023, 9:51 PM | State News | Don't Miss |

ಧಾರವಾಡ : ಜನಸಂಖ್ಯೆ ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಸಶಕ್ತ ಹಾಗೂ ಸಂಪನ್ಮೂಲಭರಿತ ರಾಷ್ಟ್ರವನ್ನು ನಿರ್ಮಿಸಲು ಕೈಜೋಡಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಟೀಲ ಶಶಿ ಅವರು ಹೇಳಿದರು. 

 ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಐ.ಇ.ಸಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆಂದು ಯುವಸಮೂಹದೊಂದಿಗೆ ಪ್ರತಿಜ್ಞೆಯನ್ನು ಮಾಡೋಣ ಎಂದು ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ತಿಳಿಸಿದರು.  

ಭಾರತದ ಜನಸಂಖ್ಯೆಯು ತೀವ್ರ ಗತಿಯಲ್ಲಿ ಬೆಳೆಯುತ್ತಿದ್ದು, ಚೀನಾ ಹಿಂದಿಕ್ಕುವ ಸಾಧ್ಯತೆ ಇದೆ. ಜನಸಂಖ್ಯೆಗನುಗುಣವಾಗಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸರ್ಕಾರಕ್ಕೆ ಕಾಲಾವಕಾಶ ಬೇಕಾಗುತ್ತದೆ. ಭಾರತ ಜನಸಂಖ್ಯೆಗನುಗುಣವಾಗಿ ಆಹಾರ, ಶಿಕ್ಷಣ, ವಸತಿ ಹಾಗೂ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದು ಅವರು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ. ನಿಂಬಣ್ಣವರ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಎಸ್.ಎಮ್. ಹೊನಕೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಅಯ್ಯನಗೌಡರ, ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ಪರಶುರಾಮ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಕಳಸೂರಮಠ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಮಂಜುನಾಥ ಸೊಪ್ಪಿನಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ, ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಕೆ.ಕೆ. ಚವ್ಹಾಣ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...