ಮಹಿಳಾ ಕೇಂದ್ರ ಕಾರಾಗೃಹದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

Source: SO News | By Laxmi Tanaya | Published on 20th September 2021, 8:39 PM | State News | Don't Miss |

ಶಿವಮೊಗ್ಗ : ಮಹಿಳಾ ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಸೆ.17 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಇವರ ವತಿಯಿಂದ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ” ನಡೆಸಲಾಯಿತು. 

     ಈ ವೇಳೆ ಏರ್ಪಡಿಸಲಾಗಿದ್ದ ಬಂಧಿಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರ ಅಧ್ಯಕ್ಷರಾದ  ಮುಸ್ತಫಾ ಹುಸೇನ್ ಉದ್ಘಾಟಿಸಿ, ಕಾರಾಗೃಹದ ಬಂಧಿಗಳ ಮಾನಸಿಕ ಆರೋಗ್ಯ ನಿರ್ವಹಣೆ ಹಾಗೂ ಪ್ರಕರಣಗಳ ತ್ವರಿತ ಇತ್ಯರ್ಥ ಕುರಿತಂತೆ ಮಾತನಾಡಿದರು ಹಾಗೂ ಇಗ್ನೋ ದೂರಶಿಕ್ಷಣ ವಿಭಾಗದಲ್ಲಿ 23 ವಿವಿಧ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ಪೂರೈಸಿರುವ ಮಹಿಳಾ ಬಂಧಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಅಭಿನಂದಿಸಿದರು.

ಕಾರಾಗೃಹದಲ್ಲಿ ಸುಮಾರು 60 ಜನ ಬಂಧಿ ನಿವಾಸಿಗಳಿಗೆ ಬ್ಯೂಟಿಷಿಯನ್ ಹಾಗೂ ಜಾಮ್, ಜೆಲ್ಲಿ ಕೆಚಪ್ ತಯಾರಿಕೆಯ 04 ತಿಂಗಳ ತರಬೇತಿಯನ್ನು ಆಯೋಜಿಸಿ ಬಂಧಿಗಳ ಬಿಡುಗಡೆಯ ನಂತರದ ಗೌರವಯುತ ಜೀವನಕ್ಕೆ ಅವಕಾಶ ನೀಡುತ್ತಿರುವ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಸರಸ್ವತಿ .ಕೆ.ಎನ್ ಶ್ಲಾಘನೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೈದ್ಯರು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಡಾ|| ಪ್ರೀತಿ ವಿ ಶಾನ್‍ಬೋಗ್, ಬಂಧಿಗಳಿಗೆ ಭಾವನಾತ್ಮಕ ಒತ್ತಡ ನಿರ್ವಹಣೆ ಮತ್ತು ಮಾನಸಿಕ ಆರೋಗ್ಯ ಕುರಿತು ಮಾತನಾಡಿದರು. 

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಕಟೀಲ್ದು ಅಶೋಕ್ ಪೈ ಮೆಮೋರಿಯಲ್ ಕಾಲೇಜಿನ ಡಾ|| ಸಂದ್ಯಾ ಕಾವೇರಿ ಕೆ, ಇವರು ಬಂಧಿಗಳೊಂದಿಗೆ ಮಾನಸಿಕ ಆರೋಗ್ಯ ನಿರ್ವಹಣೆ ಬಗ್ಗೆ ಸುದೀರ್ಘ ಆಪ್ತಸಮಾಲೋಚನೆ ನಡೆಸಿದರು. 

ಈ ಸಂದರ್ಭದಲ್ಲಿ ಎಂ.ಜಿ.ಆರ್.ಡಿ.ಎಸ್ ಟ್ರಸ್ಟ್ ವತಿಯಿಂದ ಕಾರಾಗೃಹದ ಬಂಧಿಗಳಿಗೆ ಆರೋಗ್ಯ ಕಿಟ್ ವಿತರಣೆ ಮಾಡಲಾಯಿತು. ಹಾಗೂ ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜಿನ ಸುಮಾರು 20 ಜನ ಸ್ನಾತಕೋತ್ತರ ವಿದ್ಯಾರ್ಥಿನಿಯರು ಮಾನಸಿಕ ಆರೋಗ್ಯ ಕುರಿತ ಕಿರು ನಾಟಕ ಪ್ರದರ್ಶನ ನಡೆಸಿಕೊಟ್ಟರು.

 ಮಹಿಳಾ ಕೇಂದ್ರ ಕಾರಾಗೃಹ ಅಧೀಕ್ಷಕರು ಶ್ರೀಮತಿ ಅನಿತಾ ಎಸ್ ಹಿರೇಮನಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಮತ್ತು ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶ ಸತೀಶ್, ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಮಹೇಶಕುಮಾರ್ ಜಿಗಣಿ, ಎನ್. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‍ನ ನಿರ್ದೇಶಕ ಕೆ.ಸಿ ಬಸವರಾಜ್, ಸಿಸ್ಟರ್ ಮೇರಿ ಇವ್ಲಿನ್, ಡಾ|| ಅರ್ಚನಾ ಭಟ್ ಕೆ, ವಕೀಳೆ ಕವಿತಾ ಪಿ.ಸಿ, ಪಾಲ್ಗೊಂಡಿದ್ದರು. ಬಂಧಿ ನಿವಾಸಿ ನಾಗರತ್ನ ಪ್ರಾರ್ಥಿಸಿ. ಸಂಸ್ಥೆಯ ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. 
  

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...