ಜಂತರ್‌-ಮಂತರ್‌ನಲ್ಲಿ ಕುಸ್ತಿಪಟುಗಳಿಗೆ ಪ್ರತಿಭಟನೆಗೆ ಅವಕಾಶವಿಲ್ಲ: ದಿಲ್ಲಿ ಪೊಲೀಸ್; ಬೇರೆ ಕಡೆ ಅವಕಾಶ

Source: Vb | By I.G. Bhatkali | Published on 30th May 2023, 11:43 AM | National News | Don't Miss |

ಹೊಸದಿಲ್ಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಜಂತರ್‌-ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ದಿಲ್ಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆದರೆ ದಿಲ್ಲಿಯ ಯಾವುದಾದರೊಂದು ಇತರ ಸ್ಥಳದಲ್ಲಿ ಧರಣಿ ನಡೆಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಧರಣಿ ನಿರತ ಕುಸ್ತಿಪಟುಗಳನ್ನು ಜಂತರ್‌ -ಮಂತರ್‌ನಿಂದ ಹೊರದಬ್ಬದ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಬಾಲಕಿಯರೂ ಸೇರಿದಂತೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನ ಮತ್ತು ಹುದ್ದೆಯಿಂದ ವಜಾಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಧರಣಿ ನಡೆಸುತ್ತಿದ್ದಾರೆ.

“ಜಂತರ್‌-ಮಂತರ್‌ನ ನಿಗದಿತ ಸ್ಥಳದಲ್ಲಿ ಕುಸ್ತಿಪಟುಗಳ ಧರಣಿ ಸುಗಮವಾಗಿ ನಡೆದುಕೊಂಡು ಬರುತ್ತಿತ್ತು. ರವಿವಾರ ಧರಣಿನಿರತರು ನಮ್ಮ ಮನವಿಗಳನ್ನು ನಿರ್ಲಕ್ಷಿಸಿ ಕಾನೂನು ಉಲ್ಲಂಘಿಸಿದರು. ಹಾಗಾಗಿ, ನಾವು ಅವರನ್ನು ಅಲ್ಲಿಂದ ತೆರವುಗೊಳಿಸಿ ಧರಣಿಯನ್ನು ಕೊನೆಗೊಳಿಸಿದೆವು' ಎಂದು ಹೊಸದಿಲ್ಲಿಯ ಉಪ ಪೊಲೀಸ್‌ ಕಮಿಶನರ್ ಟ್ವಿಟ್ ಮಾಡಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...