ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು

Source: so news | By MV Bhatkal | Published on 30th March 2019, 12:37 AM | Coastal News | Don't Miss |

 

ಉಡುಪಿ: ಜಿಲ್ಲೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡಿರುವ ಬೀದಿನಾಟಕದ ಒಂದು ಪ್ರಸಂಗ. 
ಕಳೆದ ಬಾರಿ ಜಿಲ್ಲೆಯಲ್ಲಿ ನಡೆದ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನ ನಡೆದ ಮತಗಟ್ಟೆಗಳನ್ನು ಗುರುತಿಸಿರುವ ಜಿಲ್ಲಾ ಸ್ವೀಪ್ ಸಮಿತಿ, ಈ ಪ್ರದೇಶಗಳಲ್ಲಿ ಯಕ್ಷಗಾನ ಮತ್ತು ಬೀದಿನಾಟಕಗಳನ್ನು ನಡೆಸುವ ಮೂಲಕ ಮತದಾನ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ.
ಕೂಲಿ ಕಾರ್ಮಿಕ ಮಾತ್ರವಲ್ಲದೇ, ಮತದಾನ ದಿನದಂದು ರಜೆ ಮಾಡಿ ಪ್ರವಾಸಕ್ಕೆ ಹೋಗುವ ನೌಕರರು, ರಜೆ ಎಂದು ದಿನವಿಡೀ ಕ್ರಿಕೆಟ್ ಆಟವಾಡುವ ಯುವಕರಿಗೆ, ಚುನಾವಣೆಯಲ್ಲಿ ರಾಜಕೀಯ ಅಭ್ಯರ್ಥಿಗಳು ನೀಡುವ ಹಣ, ಮದ್ಯದ ಆಮಿಷಕ್ಕೆ ಒಳಗಾಗಿ, ಮತದಾನ ಮಾಡುವ ಇಚ್ಛೆ ಇದ್ದರೂ ಕುಡಿತದ ಅಮಲಿನಲ್ಲಿ ಮತದಾನ ಮಾಡದೇ ಮತ ವಂಚಿತನಾಗುವ ಕುಡುಕನಿಗೆ ಅರಿವು ಮೂಡಿಸುವ ಪ್ರಸಂಗಗಳ ಮೂಲಕ ಎಲ್ಲಾ ವರ್ಗದ ಜನರಿಗೆ ಈ ಬೀದಿ ನಾಟಕ ಅರಿವು ಮೂಡಿಸಲಿದೆ.
ಸುರತ್ಕಲ್ನ ಕರಾವಳಿ ಜಾನಪದ ಕಲಾ ವೇದಿಕೆಯ ಮೂಲಕ ಬೀದಿ ನಾಟಕ ಏರ್ಪಡಿಸಲಾಗುತ್ತಿದ್ದು, ಈ ತಂಡವು ಸಾರ್ವಜನಿಕವಾಗಿ ಅತೀ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಹಾಗೂ ಕಳೆದ ಬಾರಿ ಕಡಿಮೆ ಮತ ಪ್ರಮಾಣ ದಾಖಲಾದ ಪ್ರದೇಶದಲ್ಲಿ ಬೀದಿ ನಾಟಕ ನಡೆಯಲಿದೆ. ಬೀದಿ ನಾಟಕದಲ್ಲಿ ಮತದಾನ ಕುರಿತು ಜಾಗೃತಿ ಮಾತ್ರವಲ್ಲದೇ ಮತದಾರರ ಸಹಾಯವಾಣಿಯ ಬಗ್ಗೆ, ಜಿಲ್ಲಾಡಳಿತದಿಂದ ಮತದಾರರಿಗೆ ಕಲ್ಪಿಸಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಕರಾವಳಿ ಜಾನಪದ ಕಲಾವೇದಿಕೆಯ ಗಿರೀಶ್ ನಾವಡ ಬೀದಿ ನಾಟಕ ರಚಿಸಿದ್ದು, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ ರೂಪೇಶ್ ಪ್ರಾಯೋಗಿಕವಾಗಿ ಬೀದಿ ನಾಟಕ ವೀಕ್ಷಿಸಿದ್ದು, ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ.
ಮತದಾನಕ್ಕೆ ಮನ್ನಣೆ ನೀಡಿದ ರಾಜ : ಸಮೃದ್ದಿಪುರದ ಮಹಾರಾಜ ರತ್ನವರ್ಮ ಮಕ್ಕಳಿಲ್ಲದ ಕಾರಣ ತನ್ನ ಸಾಮ್ರಾಜ್ಯಕ್ಕೆ ಸೂಕ್ತ ನಾಯಕನ ಆಯ್ಕೆಗಾಗಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಪ್ರಜೆಗಳಿಂದಲೇ ಅರ್ಹರನ್ನು ಆಯ್ಕೆ ಮಾಡುವ ಉದ್ದೇಶದಿಂದ ಮತದಾನ ನಡೆಸುತ್ತಾನೆ, ಈ ಮೂಲಕ ಸಮರ್ಥ ನಾಯಕನ ಆಯ್ಕೆಯನ್ನು ಪ್ರಜೆಗಳಿಗೇ ನೀಡುತ್ತಾನೆ. 
ಇದು ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಿದ್ದ ಪಡಿಸಿರುವ ಯಕ್ಷಗಾನ ಕಥಾ ಪ್ರಸಂಗ, ಈ ಯಕ್ಷಗಾನದಲ್ಲಿ ಮತದಾನ ಮಾಡುವ ಬಗ್ಗೆ ಮಾತ್ರವಲ್ಲದೇ, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಅರ್ಹರನ್ನು ಆಯ್ಕೆ ಮಾಡುವ ಬಗ್ಗೆ ಮಹಾರಾಜನ ಮೂಲಕ ಜನತೆಗೆ ಸಂದೇಶ ನೀಡಲಾಗಿದೆ, ಕರಾವಳಿಯಲ್ಲಿ ಯಕ್ಷಗಾನಕ್ಕೆ ತನ್ನದೇ ಆದ ವೈಶಿಷ್ಟತೆಯ ಜೊತೆಗೆ ಅತ್ಯಂತ ಹೆಚ್ಚು ಜನಪ್ರಿಯವಾಗಿದ್ದು, ಇದರ ಮೂಲಕ ನೀಡುವ ಸಂದೇಶಗಳು ಶೀಘ್ರವಾಗಿ ಸಾರ್ವಜನಿಕರಿಗೆ ತಲುಪುವುದರಿಂದ, ಜಿಲ್ಲಾ ಸ್ವೀಪ್ ಸಮಿತಿ ಇದನ್ನು ಆಯ್ಕೆ ಮಾಡಿದೆ.
ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ನಿವೃತ್ತ ಅಧಿಕಾರಿ ನಾಗೇಶ್ ಶಾನುಭಾಗ್ ಈ ಪ್ರಸಂಗ ರಚಿಸಿದ್ದು, ಕೋಟದ ಕಲಾಪೀಠ ತಂಡದ ಕಲಾವಿದರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.

Read These Next

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...