ಯಲ್ಲಾಪುರ : ವಿದ್ಯುತ್ ದುರಸ್ಥಿಪಡಿಸುವ ವೇಳೆ ವ್ಯಕ್ತಿ ವಿದ್ಯುತ್ ತಗುಲಿ ಸಾವು.

Source: SO News | By Laxmi Tanaya | Published on 5th July 2022, 10:16 PM | Coastal News |

ಯಲ್ಲಾಪುರ: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ಮಂಗಳವಾರ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.

ಪಟ್ಟಣ ವ್ಯಾಪ್ತಿಯ ಸಬಗೇರಿಯ ಆದಂಸಾಬ್ ಇ ಶೇಖ್ (75) ಮೃತಪಟ್ಟವರು. ಆದಂ ಅವರು ಉಮ್ಮಚಗಿಯ ಹುಣಸೇಮನೆಯಲ್ಲಿ ಅತಿಕ್ರಮಣ ಜಮೀನಿನಲ್ಲಿರುವ ತಮ್ಮ ಮನೆಗೆ ವಿದ್ಯುತ್  ಸಂಪರ್ಕ ಕಡಿತಗೊಂಡಿದ್ದರಿಂದ ಸರಿಪಡಿಸಲು ಸಮೀಪದ ವಿದ್ಯುತ್ ಕಂಬವನ್ನು ಏರಿದ್ದರು. ಸರ್ವಿಸ್ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗಡಿಭಾಗ ತಾಟವಾಳ ಬಳಿ 11 ಕೆ.ವಿ. ವಿದ್ಯುತ್ ತಂತಿಯ ಕಂಬ ಮುರಿದು ರಸ್ತೆಯ ಮೇಲೆ ಬಿದ್ದಿದೆ. ಇದರಿಂದ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಯಲ್ಲಾಪುರ- ಶಿರಸಿ ರಸ್ತೆಯಲ್ಲಿ ಬೇಡ್ತಿ ಬಳಿ ರಾಜ್ಯ ಹೆದ್ದಾರಿಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ವಲ್ಪ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಯಲ್ಲಾಪುರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Read These Next

ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ; ಹಲವೆಡೆ ರಸ್ತೆ ಸಂಪರ್ಕ ಕಡಿತ: ಜನಜೀವನ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಆಶ್ಲೇಷಾ ಮಳೆ ಆತಂಕವನ್ನು ಸೃಷ್ಟಿಸಿದೆ. ಕಳೆದ ಎರಡು ದಿನಗಳಿಂದ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ರೆಡ್ ...

ಕಾರವಾರ: ರಸ್ತೆ ಸಾರಿಗೆ ಸಂಸ್ಥೆಯು ವಾಹನಗಳನ್ನು ಟ್ರ್ಯಾಕಿಂಗ ಮಾಡಲು ಮೊಬೈಲ್ ಅಪ್ಲೀಕೆಶನ್‍ ಸ್ಪರ್ಧೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿಷ್ಠಿತ ವಾಹನಗಳನ್ನು ಟ್ರ್ಯಾಕಿಂಗ (tracking) ಮಾಡಲು ಮೊಬೈಲ್ ಅಪ್ಲೀಕೆಶನ್‍ನ್ನು ...

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಷ್ಟ್ರಧ್ವಜ ತಯಾರಿಸಿ ಪೂರೈಸುವ ಕೆಲಸ ತೊಡಗಿಕೊಂಡಿರುವ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರಧ್ವಜ ತಯಾರಿಸಿ ಒದಗಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯು ...